ವಿಜಯಪುರ: ಅಪ್ರಾಪ್ತೆ ಮೇಲೆ ಯುವಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಾಸು ಮುಖೇಶ್ ಸಾಳಂಕೆ ( 22 ) ಅತ್ಯಾಚಾರವೆಸಗಿರುವ ಆರೋಪಿ. ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ನಂಬಿಸಿ, ಪ್ರೀತಿಯ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಇನ್ನು ಆರೋಪಿಯನ್ನು ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ. ಈ ಕುರಿತು ವಿಜಯಪುರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.