ವಿಜಯಪುರ: ನಕಲಿ ಎನ್ ಜಿ ಒ ಗಳ ಪಟ್ಟಿ ಮಾಡಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನದೇ ಆದಂತಹ ಒಂದು ವರದಿ ತರಿಸಿಕೊಂಡು ಅಕ್ರಮ ಎನ್ಜಿಒಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಈಗಾಗಲೇ ತಂಡವೊಂದು ಕಾರ್ಯಪ್ರವೃತವಾಗಿದೆ. ನನ್ನ ಇಲಾಖೆಯಲ್ಲಿ ಎಲ್ಲವೂ ಸುವ್ಯವಸ್ಥಿತವಾಗಿ ನಡೆಯಬೇಕು. ಈ ಬಗ್ಗೆ ಅಧಿಕಾರಿಗಳ ಜೊತೆ ನಿರಂತರವಾಗಿ ಸಭೆಯನ್ನು ನಡೆಸುತ್ತಿದ್ದೇನೆ ಎಂದರು.
ಸಂಪುಟ ವಿಸ್ತರಣೆ ವೇಳೆ ಹಾಲಿ ಸಚಿವರ ಬದಲಾವಣೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಜೊಲ್ಲೆ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಮುಖಂಡರು ನಿರ್ಧಾರ ಮಾಡುತ್ತಾರೆ, ನೂತನ ಸಚಿವರಿಗಾಗಿ ಹಳಬರು ತ್ಯಾಗ ಮಾಡಬೇಕು ಎನ್ನುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ ಎಂದರು.