ETV Bharat / state

ವೆಲೋಡ್ರಮ್ ಕಾಮಗಾರಿ ಶೀಘ್ರ ಪೂರ್ಣಗೊಳ್ಳದಿದ್ದರೆ ಕ್ರಮ : ಕ್ರೀಡಾ ಸಚಿವ ಡಾ. ನಾರಾಯಣಗೌಡ

ವೆಲೋಡ್ರಮ್ ಕಾಮಗಾರಿ ನೆನೆಗುದಿಗೆ ಬಿದ್ದಿರುವುದನ್ನು ಪರಿಶೀಲನೆ ನಡೆಸಿದ ಕ್ರೀಡಾ ಸಚಿವ ಡಾ. ನಾರಾಯಣಗೌಡ, ವೆಲೋಡ್ರಮ್ ಕಾಮಗಾರಿ ತಕ್ಷಣ ಆರಂಭಿಸಿ 6 ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಅಂತಹ ಗುತ್ತಿಗೆದಾರ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

author img

By

Published : Mar 1, 2021, 3:14 PM IST

action-will-take-if-velodrome-work-is-not-completed-quickly
ಕ್ರೀಡಾ ಸಚಿವ ಡಾ ನಾರಾಯಣಗೌಡ

ವಿಜಯಪುರ: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸೈಕ್ಲಿಂಗ್​​ ವೆಲೋಡ್ರಮ್ ಕಾಮಗಾರಿಯನ್ನು 6 ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ತಾಂತ್ರಿಕ ಸಮಸ್ಯೆ ಬಗೆಹರಿಸಿ ಕಾಮಗಾರಿ ಮಾಡಬೇಕು. ಇಲ್ಲವಾದರೆ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದಾಗಿ ಕ್ರೀಡಾ ಸಚಿವ ಡಾ. ನಾರಾಯಣಗೌಡ ಎಚ್ಚರಿಸಿದರು.

ನಗರದ ಹೊರವಲಯದ ಭೂತನಾಳ ಕೆರೆ ಬಳಿ ನಿರ್ಮಿಸಲು ಉದ್ದೇಶಿಸಿರುವ ವೆಲೋಡ್ರಮ್ ಕಾಮಗಾರಿ ನೆನೆಗುದಿಗೆ ಬಿದ್ದಿರುವದನ್ನು ಪರಿಶೀಲನೆ ನಡೆಸಿದರು. ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ‌ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ವೆಲೋಡ್ರಮ್ ಕಾಮಗಾರಿ ತಕ್ಷಣ ಆರಂಭಿಸಿ 6 ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಅಂತಹ ಗುತ್ತಿಗೆದಾರ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವೆಲೋಡ್ರಮ್ ಕಾಮಗಾರಿ ಶೀಘ್ರ ಪೂರ್ಣಗೊಳ್ಳದಿದ್ದರೆ ಕ್ರಮ

ಇದೇ ವೇಳೆ ಸಚಿವರನ್ನು ಭೇಟಿಯಾದ ಸೈಕ್ಲಿಸ್ಟ್​ಗಳು ತಮ್ಮ ಸಮಸ್ಯೆ ಹೇಳಿಕೊಂಡರು. ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಸೈಕ್ಲಿಸ್ಟ್​ಗಳಿಗೆ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.

ಸ್ಥಳೀಯ ಜನಪ್ರತಿನಿಧಿಗಳು ಗೈರು

ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಸಿಂಥೆಟಿಕ್ ಟ್ರ್ಯಾಕ್ ಉದ್ಘಾಟನಾ ಸಮಾರಂಭಕ್ಕೆ ಸ್ಥಳೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಹಲವು ಜನಪ್ರತಿನಿಧಿಗಳು‌ ಗೈರಾಗಿರುವುದಕ್ಕೆ ಸಮಜಾಯಿಷಿ ನೀಡಿದ ಸಚಿವ ನಾರಾಯಣಗೌಡ, ಯತ್ನಾಳ ದೆಹಲಿಗೆ ಹೋಗಿದ್ದಾರೆ. ಕೆಲವರಿಗೆ ಅವರದ್ದೆ ಕಾರ್ಯಕ್ರಮ ಇರುತ್ತದೆ. ಈಗ ಸಿಂಥೆಟಿಕ್ ಟ್ರ್ಯಾಕ್ ಪ್ರಾಯೋಗಿಕವಾಗಿ ಉದ್ಘಾಟಿಸುತ್ತೇನೆ. ಮುಂದಿನ ದಿನ ದೊಡ್ಡ ಕಾರ್ಯಕ್ರಮ ಆಯೋಜಿಸಿ ಎಲ್ಲರನ್ನು ಕರೆಸಿ ಮತ್ತೊಮ್ಮೆ ಉದ್ಘಾಟಿಸುವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.