ವಿಜಯಪುರ: ಪವರಸ್ಟಾರ್ ಪುನೀತ್ ರಾಜ್ಕುಮಾರ್ ನಿಧನ ಹಿನ್ನೆಲೆ ಜನ ಶೋಕಸಾಗರದಲ್ಲಿ ಮುಳುಗಿದ್ದಾರೆ. ಆದರೆ, ಕೆಲ ಪುಂಡರು ಅಪ್ಪು ಫ್ಲೆಕ್ಸ್ ಅನ್ನು ವಿರೂಪಗೊಳಿಸಿರುವ ಆರೋಪ ನಗರದಲ್ಲಿ ಕೇಳಿ ಬಂದಿದೆ.
ಪುನೀತ್ ರಾಜ್ಕುಮಾರ್ ನಿಧನ ಹಿನ್ನೆಲೆ ಅವರ ಅಭಿಮಾನಿಗಳು ನಗರದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಕೋರಿ ಫ್ಲೆಕ್ಸ್ಗಳನ್ನು ಹಾಕಿದ್ದರು. ನಗರದ ಆಶ್ರಮ ರಸ್ತೆಯಲ್ಲಿರುವ ಹೈ ಮಾಸ್ಕ್ ಲೈಟ್ ಬಳಿ ಕೆಲ ಪುಂಡರು ಅಪ್ಪು ಫ್ಲೆಕ್ಸ್ನ್ನು ವಿರೂಪಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಸುದ್ದಿ ತಿಳಿದ ಅಪ್ಪು ಅಭಿಮಾನಿಗಳು ನೂರಾರು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ, ಕಿಡಿಗೇಡಿಗಳನ್ನು ಬಂಧಿಸುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.