ETV Bharat / state

ಉಚಿತ ಶಿಕ್ಷಣ: ಕೋವಿಡ್ ಸಂಕಷ್ಟಕ್ಕೆ ಮಿಡಿದ ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ

ಬಡವರಿಗೆ ಹಸಿದವರಿಗೆ ಹಲವರು ದಾಸೋಹ, ಆಹಾರ ಕಿಟ್ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ. ಆದರೆ, ಕೆಲವರಿಗೆ ಕಿಟ್ ದೊರೆಯಬಹುದು, ಕೆಲವರಿಗೆ ದೊರಕುವುದಿಲ್ಲ. ನಾವು ಜನರಿಗಾಗಿ ಏನಾದರೂ ಸೇವೆ ಸಲ್ಲಿಸಬೇಕು ಎಂಬ ಆಸೆಯಿಂದ ಉಚಿತ ಶಿಕ್ಷಣ ನೀಡುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ತಿಳಿಸಿದರು.

ಶಿಕ್ಷಣ ಸಂಸ್ಥೆ
ಶಿಕ್ಷಣ ಸಂಸ್ಥೆ
author img

By

Published : May 28, 2021, 8:43 PM IST

ಮುದ್ದೇಬಿಹಾಳ: ಕೋವಿಡ್ ಸಂಕಷ್ಟಕ್ಕೆ ಮಿಡಿದಿರುವ ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಒಂದು ವರ್ಷದವರೆಗೆ ಎಲ್​ಕೆಜಿಯಿಂದ ಎಸ್ಎಸ್ಎಲ್​ಸಿ ವರೆಗೆ ಉಚಿತ ಶಿಕ್ಷಣ ನೀಡುವ ಮಹತ್ವದ ಘೋಷಣೆ ಮಾಡಿದೆ.

ಪಟ್ಟಣದ ಅಹಿಲ್ಯಾದೇವಿ ಪಿಯು ಸೈನ್ಸ್ ಕಾಲೇಜಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಪ್ರಕಟಿಸಿದರು.

ಕೊರೊನಾ ಹಾವಳಿಯಿಂದಾಗಿ ಎಲ್ಲಾ ವ್ಯವಹಾರಗಳು ಸ್ಥಗಿತಗೊಂಡಿದ್ದು, ಪಾಲಕರು ತೀವ್ರ ತೊಂದರೆಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ನಮ್ಮ ಸಂಸ್ಥೆ ವತಿಯಿಂದ ಉಚಿತ ಶಿಕ್ಷಣ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಕೋವಿಡ್ ಸಂಕಷ್ಟಕ್ಕೆ ಮಿಡಿದ ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ

ಬಡವರಿಗೆ ಹಸಿದವರಿಗೆ ಹಲವರು ದಾಸೋಹ, ಆಹಾರ ಕಿಟ್ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ. ಆದರೆ, ಕೆಲವರಿಗೆ ಕಿಟ್ ದೊರೆಯಬಹುದು, ಕೆಲವರಿಗೆ ದೊರಕುವುದಿಲ್ಲ. ನಾವು ಜನರಿಗಾಗಿ ಏನಾದರೂ ಸೇವೆ ಸಲ್ಲಿಸಬೇಕು ಎಂಬ ಆಸೆಯಿಂದ ಉಚಿತ ಶಿಕ್ಷಣ ನೀಡುವ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಕಾರವಾರ, ಉಡುಪಿ ಭಾಗದ ನುರಿತ ಶಿಕ್ಷಕರನ್ನು ಬೋಧನೆ ಚಟುವಟಿಕೆಗಾಗಿ ನೇಮಿಸಿಕೊಳ್ಳಲಾಗುತ್ತದೆ. ಸರ್ಕಾರ ನೀಡುವ ಮಾರ್ಗಸೂಚಿಯನ್ವಯ ಪ್ರವೇಶಾತಿ, ತರಗತಿಗಳನ್ನು ನಡೆಸಲಾಗುತ್ತದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.