ವಿಜಯಪುರ: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಇಡಿಜಿಎಸ್ ತಂತ್ರಜ್ಞಾನ ಬಳಸುವ ನೆಪದಲ್ಲಿ ವಿದ್ಯಾರ್ಥಿಗಳಿಂದ ಹಣ ಲೂಟಿ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಕೈಗೊಂಡು ವಿದ್ಯಾರ್ಥಿಗಳು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಶ್ವವಿದ್ಯಾಲಯಗಳ ಅಂಕಪಟ್ಟಿಯನ್ನು ಇಡಿಜಿಎಸ್ ತಂತ್ರಾಂಶದ ಮೂಲಕ ಮುದ್ರಿಸುವ ನೆಪದಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಂದ ₹ 156 ತೆಗೆದುಕೊಳ್ಳುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ತಹಶೀಲ್ದಾರರು ತಕ್ಷಣವೇ ಜಿಲ್ಲಾಧಿಕಾರಿ ಗಮನಕ್ಕೆ ತಂದು ತಮ್ಮ ಮನವಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.