ವಿಜಯಪುರ: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವೇಳೆ ಎಲ್ಲರನ್ನೂ ಗಣನೆಗೆ ತೆಗೆದುಕೊಂಡು ಆಯ್ಕೆ ಮಾಡುವಂತೆ ವರಿಷ್ಠರಿಗೆ ಮನವಿ ಮಾಡುವುದಾಗಿ ತಿಳಿಸಿದ ಅವರು, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಹೆಚ್ ಕೆ ಪಾಟೀಲ್ ಸೇರಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧ್ಯಕ್ಷರ ಆಯ್ಕೆ ಮಾಡಬೇಕು. ನಾವು ಈಗಾಗಲೇ ಹಲವು ಕಡೆ ಅಧಿಕಾರ ಕಳೆದುಕೊಂಡಿದ್ದೇವೆ. ಇಂತಹ ಸಮಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ ಎಂದು ಸಲಹೆ ನೀಡಿದರು.
ಪಕ್ಷ ವೀಕ್ ಆದಾಗ ವರಿಷ್ಠರು ಎಚ್ಚೆತ್ತುಕೊಳ್ಳಬೇಕು. ಹಾಗಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಬೇಕಿದೆ ಎಂದರು. ಈ ಸಮಯದಲ್ಲಾದರೂ ನಮ್ಮ ವರಿಷ್ಠರು ಆತ್ಮವಿಮರ್ಶೆ ಮಾಡಿಕೊಳ್ಳುವುದು ಸೂಕ್ತ ಎಂದರು.