ವಿಜಯಪುರ: ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಯುಕೆಜಿ ಶಾಲೆ ಪ್ರಾರಂಭಿಸಲು ಒತ್ತಾಯಿಸಿ ಅಂಗನವಾಡಿ ನೌಕರ ಸಂಘ ಜಿಲ್ಲಾ ಸಮಿತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿ ವೃತ್ತದಿಂದ ಪಾದಯಾತ್ರೆ ಕೈಗೊಂಡ ಅಂಗನವಾಡಿ ನೌಕಕರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಅಂಗನವಾಡಿ ನೌಕಕರಿಗೆ ಸೇವಾ ಭದ್ರತೆ ಹೆಚ್ಚಿಸಿ, ಸೇವಾ ನಿಯಮಗಳನ್ನು ರಚಿಸಬೇಕು ಹಾಗೂ ಐದು ವರ್ಷಗಳ ಕಾಲ ಪೂರೈಸಿದ ಮೇಲ್ವಿಚಾರಕರನ್ನು ಕಡ್ಡಾಯವಾಗಿ ವರ್ಗಾವಣೆ ಮಾಡಬೇಕು. ರಾಜ್ಯದ ಅನೇಕ ಭಾಗಗಳಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಿ, ಅಂಗವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಭಿವೃದ್ಧಿ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.