ETV Bharat / state

ಸ್ಥಳೀಯ ಸಂಸ್ಥೆಗಳಿಗೆ ಶೀಘ್ರ ನೂತನ ಆಡಳಿತ ಮಂಡಳಿ ರಚಿಸಿ: ಪುರಸಭೆ ಸದಸ್ಯರಿಂದ ಡಿಸಿಎಂಗೆ ಮನವಿ ಸಲ್ಲಿಕೆ..! - ಸ್ಥಳೀಯ ಸಂಸ್ಥೆಗಳಿಗೆ ಶೀಘ್ರ ನೂತನ ಆಡಳಿತ ಮಂಡಳಿ

ಸ್ಥಳೀಯ ಸಂಸ್ಥೆಗಳ ನೂತನ ಆಡಳಿತ ಮಂಡಳಿಯನ್ನು ರಚಿಸಿ, ಶೀಘ್ರದಲ್ಲಿ ಅಧಿಕಾರ ನೀಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಮನವಿ ಸಲ್ಲಿಸಲಾಗಿದೆ.

Appeal to DCM by municipal members
ಪುರಸಭೆ ಸದಸ್ಯರಿಂದ ಡಿಸಿಎಂಗೆ ಮನವಿ ಸಲ್ಲಿಕೆ
author img

By

Published : Aug 5, 2020, 9:42 PM IST

ಮುದ್ದೇಬಿಹಾಳ: ರಾಜ್ಯದ ಸ್ಥಳೀಯ ಸಂಸ್ಥೆಗಳ ನೂತನ ಆಡಳಿತ ಮಂಡಳಿಯನ್ನು ರಚಿಸಿ, ಶೀಘ್ರದಲ್ಲಿ ಅಧಿಕಾರ ನೀಡಬೇಕೆಂದು ಆಗ್ರಹಿಸಿ ಪಟ್ಟಣದ ಪುರಸಭೆ ಸದಸ್ಯರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಹುಡ್ಕೋದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸವದಿಗೆ ಸದಸ್ಯರು ಮನವಿ ಪತ್ರ ಸಲ್ಲಿಸಿದರು.

ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಾರದ ಕಾರಣ ಪಟ್ಟಣಗಳಲ್ಲಿ ವಾಸಿಸುವ ನಾಗರಿಕರಿಗೆ ಸ್ಥಳೀಯ ಸಂಸ್ಥೆಗಳಿಂದ ಮೂಲಭೂತ ಸೌರ‍್ಯಗಳು ಸಮರ್ಪಕವಾಗಿ ದೊರಕುತ್ತಿಲ್ಲ. ಇದರಿಂದಾಗಿ ನಾಗರಿಕರು ತಮ್ಮ ಮೂಲಭೂತ ಸೌಲಭ್ಯಗಳನ್ನು ಪಡೆಯುವಲ್ಲಿ ನಿತ್ಯ ಪರದಾಡುತ್ತಿದ್ದಾರೆ ಎಂದು ಸದಸ್ಯರು ತಿಳಿಸಿದರು.

ನೂತನ ಆಡಳಿತ ಮಂಡಳಿ ರಚನೆಗೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಬಿಡುಗಡೆಯಾದಾಗ ಸಂಬಂಧಪಟ್ಟ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳ ಲೋಪದೋಷಗಳಿಂದ ಆಯ್ಕೆಯ ಪಟ್ಟಿಯಲ್ಲಿನ ದೋಷಗಳನ್ನು ಪ್ರಶ್ನಿಸಿ, ಚುನಾಯಿತರಾದ ಸದಸ್ಯರುಗಳು ಪದೇ ಪದೇ ನ್ಯಾಯಾಲಯದ ಮೆಟ್ಟಿಲೇರುತ್ತಿದ್ದು ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿತನ ಇದಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

Appeal to DCM by municipal members
ಮನವಿ ಪತ್ರ

ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಆಡಳಿತ ಮಂಡಳಿಗಳ ರಚನೆಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರ ಜೊತೆಗೆ ಚರ್ಚಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯ ಆಯ್ಕೆಯ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಬಿಡುಗಡೆ ಮಾಡಬೇಕು ಎಂದು ತಿಳಿಸಲಾಗಿದೆ.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ರಾಜ್ಯ ಸರ್ಕಾರ, ಹೈಕೋರ್ಟ್​ ನ್ಯಾಯಮೂರ್ತಿಗಳಿಗೆ ವಿಶೇಷ ಹಾಗೂ ತುರ್ತು ಪ್ರಕರಣದ ಅಡಿಯಲ್ಲಿ ಅರ್ಜಿ ಸಲ್ಲಿಸಿ ನ್ಯಾಯಾಲಯದಿಂದ ಇತ್ಯರ್ಥಪಡಿಸಿಕೊಂಡು ಕೂಡಲೇ ನೂತನ ಆಡಳಿತ ಮಂಡಳಿ ರಚನೆಗೆ ಮುಂದಾಗಬೇಕು. ವಿಳಂಬವಾದರೆ ಚುನಾಯಿತ ಸದಸ್ಯರು ಪ್ರತಿಭಟನೆಯ ಹಾದಿ ಹಿಡಿಯಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.