ವಿಜಯಪುರ: ಬೀದಿ ನಾಟಕ ಕಾರ್ಯಕ್ರಮಗಳನ್ನು ಆರಂಭಿಸುವಂತೆ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಳೆದ 7 ತಿಂಗಳಿಂದ ಬೀದಿ ನಾಟಕ ಕಲಾವಿದರು ದುಡಿಮೆಯಿಲ್ಲದೆ ಕಂಗಾಲಾಗಿದ್ದು, ಸರ್ಕಾರ ಕೂಡ ಬೀದಿ ನಾಟಕ ಕಲಾವಿದರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿಲ್ಲ. ಕಲಾವಿದರು ಕುಟುಂಬ ನಿರ್ವಹಣೆ ಮಾಡಲಾಗದೆ, ಮಕ್ಕಳಿಗೆ ಶಿಕ್ಷಣದ ಖರ್ಚು ನಿಭಾಯಿಸಲಾಗದ ಸ್ಥಿತಿ ಬಂದಿದೆ. ಲಾಕ್ಡೌನ್ ಪರಿಣಾಮ ಬೇರೆ ಕ್ಷೇತ್ರದಲ್ಲಿ ಉದ್ಯೋಗ ಸಿಗದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರ ಕಾರ್ಯಕ್ರಮ ಆರಂಭಿಸುವಂತೆ ಕಲಾವಿದರು ಒತ್ತಾಯಿಸಿದರು.
ಸಂಕಷ್ಟದಲ್ಲಿರುವ ಕಲಾವಿದರ ನೆರವಿಗೆ ಸರ್ಕಾರ ಬೀದಿ ನಾಟಕ ಪ್ರಾರಂಭಕ್ಕೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.