ETV Bharat / state

ಹಣಕಾಸಿನ ವಿಚಾರ: ವಿಜಯಪುರದಲ್ಲಿ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದ 12 ಜನ ಆರೋಪಿಗಳ ಬಂಧನ

ಹಣಕಾಸಿನ ವಿಚಾರಕ್ಕಾಗಿ ವ್ಯಕ್ತಿಯೊಬ್ಬನ ಮೇಲೆ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಆರೋಪಿಗಳ ಬಂಧಿಸಲಾಗಿದೆ.

Shooting in Vijayapur
ಎಸ್ಪಿ ಋಷಿಕೇಶ್ ಸೋನಾವಣೆ
author img

By ETV Bharat Karnataka Team

Published : Nov 22, 2023, 1:33 PM IST

Updated : Nov 22, 2023, 2:07 PM IST

ಮಾಹಿತಿ ನೀಡಿದ ಎಸ್ಪಿ ಋಷಿಕೇಶ್ ಸೋನಾವಣೆ

ವಿಜಯಪುರ: ಹಣಕಾಸಿನ ವಿಚಾರದ ಹಿನ್ನೆಲೆ ವ್ಯಕ್ತಿಯೊಬ್ಬನ ಮೇಲೆ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಆರೋಪಿಗನ್ನು ಗೋಲಗುಂಬಜ್‌ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ''ಹಣಕಾಸಿನ ವ್ಯವಹಾರ ಹಿನ್ನೆಲೆ ಫೈರಿಂಗ್ ಮಾಡಿದ್ದ ರೌಡಿಶೀಟರ್ ಹೈದರ್ ಅಲಿ ನದಾಫ್ ಸೇರಿದಂತೆ 12 ಜನ ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ. ನವೆಂಬರ್ 10ರಂದು ನಗರದ ಒಡ್ಡರ ಓಣಿಯಲ್ಲಿ ಸೋಹೆಲ್ ಕಕ್ಕಳಮೇಲಿ ಎಂಬವರ ಮೇಲೆ ಫೈರಿಂಗ್ ನಡೆಸಿ, ಆರೋಪಿಗಳು ಪರಾರಿಯಾಗಿದ್ದರು. ಅದಕ್ಕಾಗಿ ಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ ಎರಡು ಕಂಟ್ರಿ ಪಿಸ್ತೂಲ್, ಎರಡು ಬೈಕ್, ಮಾರಕಾಸ್ತ್ರ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೊತೆಗೆ ಕಂಟ್ರಿ ಪಿಸ್ತೂಲ್ ಎಲ್ಲಿಂದ ತರಿಸಿಕೊಳ್ಳಲಾಗಿದೆ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಬಂಧಿತ ಆರೋಪಿಗಳ ಪೈಕಿ ಇಬ್ಬರು ಕಾನೂನು ಸಂಘರ್ಷಕ್ಕೆ (ಅಪ್ರಾಪ್ತ ವಯಸ್ಸಿನವರು) ಒಳಗಾದವರು'' ಎಂದು ಎಸ್​ಪಿ ಸೋನಾವಣೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು: ವಿಚಾರಣೆಗೆ ಕರೆತಂದಿದ್ದ ಯುವಕ ಆತ್ಮಹತ್ಯೆ, ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

Last Updated : Nov 22, 2023, 2:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.