ವಿಜಯಪುರ: ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಹೊಂದಿದ್ದ ಇಬ್ಬರನ್ನು ಬಂಧಿಸಿರುವ ನಗರ ಪೊಲೀಸರು ಅವರಿಂದ 3 ಪಿಸ್ತೂಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ ಕಾಮಣ್ಣ ಕ್ಷತ್ರಿ ಹಾಗೂ ಬಬಲೇಶ್ವರದ ಹನಮಂತ ಯಲ್ಲಪ್ಪ ಹಳ್ಳಿ ಎಂದು ಗುರುತಿಸಲಾಗಿದೆ. ಬಂಧಿತರಿಂದ 3 ಕಂಟ್ರಿ ಪಿಸ್ತೂಲ್, 10 ಜೀವಂತ ಗುಂಡುಗಳು, 6 ವಿವಿಧ ರೀತಿಯ ಆಯುಧಗಳು ಸೇರಿ 77 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನೂ ಮೂವರು ಪರಾರಿಯಾಗಿದ್ದು ಅವರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.