ವಿಜಯಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗೋಳ ಗುಮ್ಮಟ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ನಗರದ ಹರಣಶಿಖಾರಿ ಕಾಲೋನಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ, ಮಾಲು ಸಮೇತ ಇಬ್ಬರನ್ನು ಬಂಧಿಸಲಾಗಿದೆ.
ಹರಣಶಿಖಾರಿ ಕಾಲೊನಿಯ ಚಂಪು ರಾಜು ಚವ್ಹಾಣ (32), ಚಂದ್ರು ಶರಣಪ್ಪ ಚವ್ಹಾಣ (42) ಬಂಧಿತರು. ಇವರಿಂದ 5 ಕೆಜಿ ತೂಕದ 50 ಸಾವಿರ ಮೌಲ್ಯದ ಗಾಂಜಾ ಹಾಗೂ 2,050 ನಗದು ವಶಕ್ಕೆ ಪಡೆದು ಕೊಂಡಿದ್ದಾರೆ. ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.