ವಿಜಯಪುರ: ಹೊರ ಗುತ್ತಿಗೆ ನೌಕಕರ ವೇತನ, ಕಾಯಂ ನೌಕರಿ ಹಾಗೂ ಇತರೆ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತೆ ಅಂಗವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರ ಜಂಟಿ ಸಂಘಟನೆಗಳಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಕೊರೊನಾ ಆತಂಕದ ನಡೆಯುವೆ ಆಶಾ ಕಾರ್ಯಕರ್ತೆಯರು, ಅಂಗವಾಡಿ ಕಾರ್ಯಕರ್ತೆಯರು ಸೇರಿದಂತೆ ಹಲವರು ಜೀವ ಭಯ ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಅವರಿಗ ಯಾವುದೇ ಆರೋಗ್ಯ ರಕ್ಷಣೆಯ ಕಿಟ್‌ಗಳನ್ನ ನೀಡದೆ ಕಡಿಮೆ ವೇತನದಲ್ಲಿ ದುಡಿಸಿಕೊಳ್ಳುತ್ತಿದೆ. ಅಲ್ಲದೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು.
ಅಲ್ಲದೇ ಅಪಾಯಕಾರಿ ಕೆಲಸಕ್ಕೆ ಪರಿಹಾರ ಭತ್ಯೆ ನೀಡುವಂತೆ ಅನೇಕ ಕಾರ್ಮಿಕ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ವೇತನ ಪಾವತಿ, ವಸತಿ ಸಂಬಂಧಿಸಿದಂತೆ ಹೋರಾಟ ಮಾಡಿದರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮಗೂ ಇದಕ್ಕೂ ಸಂಬಂಧವಿಲ್ಲದಂತೆ ವರ್ತನೇ ಮಾಡುತ್ತಿವೆ ಎಂದು ಪ್ರತಿಭಟನಾಕಾರು ಕಿಡಿಕಾರಿದರು.
ಇನ್ನೂ ಸರ್ಕಾರ ಕಡಿಮೆ ಸಂಬಳದಲ್ಲಿ ಕಾರ್ಯನಿರ್ವಹಸುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ನೀಡುಬೇಕು. ಕಾಲ ಕಾಲಕ್ಕೆ ವೇತನ ಪಾವತಿ ಹಾಗೂ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.