ಸುರಪುರ (ಯಾದಗಿರಿ): ಮಾಸಿಕ 12 ಸಾವಿರ ವೇತನ ಹಾಗೂ ಸುರಕ್ಷತಾ ಕಿಟ್ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಜಮಾಯಿಸಿದ ಆಶಾ ಕಾರ್ಯಕರ್ತೆಯರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪುಷ್ಪಲತಾ, ಜುಲೈ 10ನೇ ತಾರೀಖಿನಿಂದ ನಮ್ಮ ಸೇವೆಯನ್ನು ನಿಲ್ಲಿಸಿ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ, ಸರ್ಕಾರ ನಮ್ಮ ಹೋರಾಟಕ್ಕೆ ಬೆಲೆ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಂತರ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವಿಶ್ವನಾಥ ಯಾದಗೀರಕರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.