ವಿಜಯಪುರ: ಸಿಂದಗಿ ತಾಲೂಕಿನ ನಾಗಾಂವಿ ಬಿ.ಕೆ ಗ್ರಾಮದಲ್ಲಿ ಇಂದು ಬೆಳಗ್ಗೆ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ಸಿಂದಗಿ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.
ಗುರಣ್ಣ ಸಿದ್ದನಗೌಡ ಬಿರಾದಾರ (30) ಹಲ್ಲೆಗೊಳಗಾದ ಕಾರ್ಯಕರ್ತ. ಇಂದು ಬೆಳಗ್ಗೆ ಬೆಳೆಗಳಿಗೆ ನೀರು ಬಿಡಲು ಹೋದ ಸಂದರ್ಭದಲ್ಲಿ ಮುಖಕ್ಕೆ ಬಟ್ಟೆ ಮುಚ್ಚಿಕೊಂಡು ಬಂದ ಇಬ್ಬರು ವ್ಯಕ್ತಿಗಳು, ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಪರಿಣಾಮ ಸಿದ್ದನಗೌಡರ ಕುತ್ತಿಗೆ, ಕಾಲಿಗೆ ಗಾಯವಾಗಿದ್ದು, ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಗುರಣ್ಣ ಸಿದ್ದನಗೌಡ, ಇಬ್ಬರು ವ್ಯಕ್ತಿಗಳು ಮುಖಕ್ಕೆ ಬಟ್ಟೆ ಮುಚ್ಚಿಕೊಂಡು ಬಂದು ನನ್ನ ಮೇಲೆ ಹಲ್ಲೆ ಮಾಡಿದರು. ಏನೂ ಮಾತನಾಡದೆ ನನಗೆ ಚಾಕುವಿನಿಂದ ಇರಿದು ಪರಾರಿಯಾದರು ಎಂದು ಹೇಳಿದ್ದಾರೆ.