ಮುದ್ದೇಬಿಹಾಳ (ವಿಜಯಪುರ) : ಮಹಾರಾಷ್ಟ್ರದ ದಾದರನಲ್ಲಿರುವ ಡಾ.ಬಾಬಾಸಾಹೇಬ ಅಂಬೇಡ್ಕರ್ ವಾಸವಿದ್ದ ರಾಜಗೃಹದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯದ ದಲಿತ ಸಂಘರ್ಷ ಸಮಿತಿ (ನಾಗವಾರ) ಬಣದ ಮುಖಂಡರು ಹಾಗೂ ಕಾರ್ಯಕರ್ತರು ತಾಳಿಕೋಟಿಯಲ್ಲಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ದುಷ್ಕರ್ಮಿಗಳು ಅಂಬೇಡ್ಕರ್ ಅವರ ರಾಜಗೃಹ ಮನೆಯ ಮೇಲೆ ದಾಳಿ ಮಾಡಿರುವುದು ಇಡೀ ಮಾನವ ಕುಲವೇ ತಲೆತಗ್ಗಿಸುವಂತೆ ಮಾಡಿದೆ. ಈ ದಾಳಿಯಲ್ಲಿ ಯಾರೇ ಭಾಗಿಯಾಗಿದ್ರೂ ಅವರನ್ನು ಕೂಡಲೇ ಬಂಧಿಸಿ, ಗಲ್ಲು ಶಿಕ್ಷೆ ಕೊಡಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.