ETV Bharat / state

ಭೀಮಾತೀರದ ಬೆದರಿಕೆ ಪ್ರಕರಣ: ಭೈರಗೊಂಡ ಜಾಮೀನು ಅರ್ಜಿ ತಿರಸ್ಕೃತ

author img

By

Published : Jul 27, 2020, 8:04 PM IST

Updated : Jul 27, 2020, 8:23 PM IST

ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ಅಲ್ತಾಫ್ ಖನಗಾವಿ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಹಲವು ಕ್ರಿಮಿನಲ್ ಆಪಾದನೆಗಳ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ.

Bail rejected  for accused Mahadeva Bairagonda
ಭೀಮಾತೀರದ ಬೆದರಿಕೆ ಪ್ರಕರಣ; ಭೈರಗೊಂಡ ಜಾಮೀನು ತಿರಸ್ಕಾರ

ವಿಜಯಪುರ: ಚಿನ್ನದ ವ್ಯಾಪಾರಿಗೆ 5 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತನಾಗಿರುವ ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ಪ್ರಕರಣದ 3ನೇ ಅರೋಪಿಯಾಗಿರುವ ಮಹಾದೇವ ಸಾಹುಕಾರ್ ಭೈರಗೊಂಡ ಇಂಡಿ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹಲವು ಕ್ರಿಮಿನಲ್ ಆಪಾದನೆಗಳ ಹಿನ್ನೆಲೆಯಲ್ಲಿ ಇದೀಗ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ. ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ಅಲ್ತಾಫ್ ಖನಗಾವಿ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿದ್ದಾರೆ.

ಚಿನ್ನದ ವ್ಯಾಪಾರಿ ನಾಮದೇವ ಡಾಂಗೆ ಎಂಬುವರಿಗೆ 5 ಕೋಟಿ ರೂ. ಇಲ್ಲವೇ 3 ಕೆ.ಜಿ ಚಿನ್ನ ನೀಡುವಂತೆ ಬೆದರಿಸಿದ್ದಾರೆ ಎಂದು ಆರೋಪಿಸಿ ಮಹಾದೇವ ಸಾಹುಕಾರ ಭೈರಗೊಂಡ, ಭಾಗಪ್ಪ ಹರಿಜನ ಮತ್ತು ಲಕ್ಷ್ಮೀಕಾಂತ ಪಾಟೀಲ ವಿರುದ್ಧ ನಾಮದೇವ ದೂರು ನೀಡಿದ್ದರು. ಈ ಹಿನ್ನೆಲೆ ಮಹಾದೇವ ಸಾಹುಕಾರ ಭೈರಗೊಂಡನನ್ನು ಪೊಲೀಸರು ಬಂಧಿಸಿದ್ದರು. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Last Updated : Jul 27, 2020, 8:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.