ವಿಜಯಪುರ: ಬ್ಲ್ಯಾಕ್ ಫಂಗಸ್ ಪ್ರಕರಣ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಲ್ಲಿಯವರೆಗೆ 67 ಜನರಿಗೆ ಈ ರೋಗ ತಗುಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಚೇತರಿಸಿಕೊಂಡವರಿಗೆ ಇದು ತಗಲುತ್ತಿದೆ. ಸದ್ಯ ಔಷಧಿ ಲಭ್ಯವಾಗುತ್ತಿಲ್ಲ. ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.
ಏಳು ಜನರು ಬ್ಲ್ಯಾಕ್ ಫಂಗಸ್‌ನಿಂದ ಗುಣಮುಖರಾಗಿದ್ದಾರೆ. ನಾರ್ಮಲ್ ಕೋರ್ಸ್ ಮೂಲಕ ಇದಕ್ಕೆ ಚಿಕಿತ್ಸೆ ನೀಡಲಾಗ್ತಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಸರ್ಕಾರದಿಂದ ಬರಬೇಕಾದ ಔಷಧಿ ಇನ್ನೂ ಬಂದಿಲ್ಲ. ಅಲ್ಲಿಯವರೆಗೆ ನಾರ್ಮಲ್ ಕೋರ್ಸ್‌ನಂತೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.