ವಿಜಯಪುರ: ಸುಳ್ಳನ್ನೇ ದಾರಿ ಮಾಡಿಕೊಂಡು ಲೀಡರ್ ಆಗಲು ಹೊರಟಿದ್ದಾರೆ ಎಂದಿದ್ದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿಕೆಗೆ 'ಬೀದಿನಾಯಿಗಳಿಗೆ ಉತ್ತರ ನೀಡುವುದಿಲ್ಲ' ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಟ್ಟಣಶೆಟ್ಟಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಗರಂ ಆದರು.
ಇನ್ನು, ರಾಜ್ಯದಲ್ಲಿ ಮೂರುವರೆ ವರ್ಷಗಳ ಕಾಲ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಲಿ ಎಂಬುದು ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರ ಆಶಯವಾಗಿದೆ. ಸರ್ಕಾರಕ್ಕೆ ಬಜೆಟ್ ಮಂಡಿಸಲು ಸಹಕಾರ ನೀಡಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲವೆಂದು ಯತ್ನಾಳ್ ಹೇಳಿದ್ದಾರೆ.
ಇನ್ನು, ಬಿಜೆಪಿ ಕಚೇರಿಗೆ ಲಿಂಗಾಯತ ನಾಯಕರಿಗೆ ಅವಕಾಶ ನೀಡಲಾಗುತ್ತಿಲ್ಲ ಎಂಬ ವಿಚಾರ ಕುರಿತು ಮಾತನಾಡಿದ ಶಾಸಕ ಯತ್ನಾಳ, ಈ ಕುರಿತು ನನಗೆ ಸಂಪೂರ್ಣ ಮಾಹಿತಿ ಇಲ್ಲ. ನಮ್ಮ ರಾಜಾಧ್ಯಕ್ಷರು ಹಿಂದೂ ಪರ ಚಿಂತಕರು ಹಾಗೂ ಅತ್ಯಂತ ಒಳ್ಳೆಯ ವ್ಯಕ್ತಿ ಇದ್ದಾರೆ. ಅವರು ಹಾಗೆ ಮಾಡೋದಿಲ್ಲ ಎಂಬ ವಿಶ್ವಾಸ ನನಗಿದೆ ಎಂದರು.