ವಿಜಯಪುರ: ಭೀಮಾ ತೀರದ ನಟೋರಿಯಸ್ ಮಹಾದೇವ ಸಾಹುಕಾರ ಭೈರಗೊಂಡ ಕೊಲೆ ಯತ್ನ ಹಾಗೂ ಆತನ ಅಂಗರಕ್ಷಕ, ಕಾರು ಚಾಲಕ ಕೊಲೆ ಪ್ರಕರಣದ ಕಿಂಗ್ ಪಿನ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ನಗರದ ಬಂಬಳ ಅಗಸಿಯ ನಿವಾಸಿ ಮಡಿವಾಳಯ್ಯ ಪಂಚಯ್ಯ ಹಿರೇಮಠ ಬಂಧಿತ ಆರೋಪಿ. ಇಡೀ ಶೂಟೌಟ್ ಪ್ರಕರಣದ ರೂವಾರಿ ಈತನೇ ಎಂದು ಹೇಳಲಾಗ್ತಿದೆ. ನ. 2ರಂದು ವಿಜಯಪುರ ಹೊರವಲಯದ ಕನ್ನಾಳ ಕ್ರಾಸ್ ಬಳಿ ಮಹಾದೇವ ಸಾಹುಕಾರ ಭೈರಗೊಂಡ ಹಾಗೂ ಆತನ ಬೆಂಬಲಿಗರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದರು. ಪ್ರಕರಣದಲ್ಲಿ ಮಹಾದೇವ ಸಾಹುಕಾರ ಭೈರಗೊಂಡ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ಇವರ ಇಬ್ಬರು ಬೆಂಬಲಿಗರು ಗುಂಡು ತಗುಲಿ ಸಾವನ್ನಪ್ಪಿದ್ದರು.
ಓದಿ: ಭೀಮಾ ತೀರದ ಶೂಟೌಟ್ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 30 ಜನರನ್ನು ಬಂಧಿಸಲಾಗಿದೆ. ಮಹಾದೇವ ಸಾಹುಕಾರ ಭೈರಗೊಂಡ ಹತ್ಯೆಗೆ ಯತ್ನ ಹಿಂದೆ ಈತನ ಮಾಸ್ಟರ್ ಮೈಂಡ್ ಕೆಲಸ ಮಾಡಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ ಒಂದು ಕಾರು, ಪಿಸ್ತೂಲ್ ಹಾಗೂ ಒಂದು ಜೀವಂತ ಗುಂಡನ್ನು ವಶಪಡಿಸಿಕೊಳ್ಳಲಾಗಿದೆ.
ಓದಿ: ಮಹಾದೇವ ಸಾಹುಕಾರ ಕೊಲೆ ಯತ್ನ ಪ್ರಕರಣ : ಮತ್ತೆ ಇಬ್ಬರ ಬಂಧನ
ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.