ಮುದ್ದೇಬಿಹಾಳ(ವಿಜಯಪುರ): ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ತಾಲೂಕಿನ ಹುನಕುಂಟಿ ಗ್ರಾಮದ ಬಳಿ ನಡೆದಿದೆ.
ಮೃತ ಬೈಕ್ ಸವಾರ ತಾಲೂಕಿನ ನೆರಬೆಂಚಿ ಗ್ರಾಮದ ಪರಮಾನಂದ ಹನುಮಂತ ನಾಯ್ಕ ಮಕ್ಕಳ (28) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ಮಲ್ಲಪ್ಪ ಮಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.