ವಿಜಯಪುರ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಜಿಲ್ಲೆಯ ಇಂಡಿ ತಾಲೂಕಿನ ನಾದಖೇಡಿ ಗ್ರಾಮದ ಬಳಿ ತಡರಾತ್ರಿ ಈ ಘಟನೆ ನಡೆದಿದೆ.
ವಿಜಯಪುರ ನಿವಾಸಿ ರಾಹುಲ್ (21) ಮೃತ ಬೈಕ್ ಸವಾರ. ಇನ್ನೋರ್ವ ಗಾಯಾಳು ಹೆಸರು ತಿಳಿದು ಬಂದಿಲ್ಲ. ಅತಿ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ರಾಹುಲ್ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.
ವಿಜಯಪುರ ಆರ್ಟಿಒ ಪಾಸಿಂಗ್ ಹೊಂದಿರುವ ಬೈಕ್ ನಂ KA 28, E 2220 ಆಗಿದೆ. ಸದ್ಯ ಇಂಡಿ ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಗಾಯಾಳುವನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.