ವಿಜಯಪುರ : ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.
ಜೈ ಹನುಮಾನ ನಗರದ ನಿವಾಸಿ ರವಿ ಹಾಜಪ್ಪ ಚಲವಾದಿ ಬಂಧಿತ ಆರೋಪಿ. ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿ ಸಿಕ್ಕಿ ಬಿದ್ದಿದ್ದು, ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಬಂಧಿತನಿಂದ 2.50 ರೂ ಲಕ್ಷ ಮೌಲ್ಯದ ನಾಲ್ಕು ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ಗೋಲಗುಮ್ಮಟ ಪೊಲೀಸ್ ಠಾಣೆ ಹಾಗೂ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ.
ಎಸ್ಪಿ ಅನುಪಮ್ ಅಗರವಾಲ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಡಾ.ರಾಮ ಅರಸಿದ್ದಿ ನೇತೃತ್ವದಲ್ಲಿ ಪೊಲೀಸ್ ಅಧಿಕ್ಷಕ ಲಕ್ಷ್ಮೀನಾರಾಯಣ, ಸಿಪಿಐ ರವೀಂದ್ರ ನಾಯ್ಕೋಡಿ, ಪಿಎಸ್ಐಗಳಾದ ಎಸ್.ಬಿ.ಗೌಡರ, ಆರ್.ಬಿ.ಕೂಡಗಿ ಸೇರಿದಂತೆ ಇತರ ಸಿಬ್ಬಂದಿಗಳ ತಂಡವನ್ನ ರಚನೆ ಮಾಡಲಾಗಿತ್ತು. ಬೈಕ್ ಕಳ್ಳತನ ಪ್ರಕರಣ ಭೇದಿಸಿದ ತಂಡಕ್ಕೆ ಎಸ್ಪಿ ಬಹುಮಾನ ಘೋಷಿಸಿದ್ದಾರೆ.