ವಿಜಯಪುರ: ಬೈಕ್ ಸವಾರನೊಬ್ಬ ದಿಢೀರನೆ ಕಾರಿನ ಮುಂದೆ ಬಂದ ಕಾರಣ ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಅವರ ಕಾರು ಅಪಘಾತಕ್ಕೀಡಾದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೋಳಸಂಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.

ಅಪಘಾತ ತಪ್ಪಿಸಲು ಹೋಗಿ ಶಾಸಕರ ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕಾರೊಂದು ಶಾಸಕರ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಸಕರ ಕಾರಿನ ಹಿಂಭಾಗ ಜಖಂಗೊಂಡಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.