ವಿಜಯಪುರ: ಪಕ್ಷ ಬಲವರ್ಧನೆಗಾಗಿ ವಿಜಯಪುರದ ರಾಣಿ ಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯ ಪ್ರಕೋಷ್ಠಕದ ಸಂಚಾಲಕ, ಸಹ ಸಂಚಾಲಕ ಹಾಗೂ ರಾಜ್ಯ ಸಮಿತಿ ಸದಸ್ಯರ ಒಂದು ದಿನದ ವಿಶೇಷ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಟೀಲ್, ರಾಷ್ಟ್ರ ಪರಿವರ್ತನೆಗೆ ಯುವಕರ ಪಾತ್ರ ಮಹತ್ವದ್ದಾಗಿದೆ. ಬಿಜೆಪಿ ಕಾರ್ಯಕರ್ತರು ಹೆಚ್ಚೆಚ್ಚು ಯುವಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಒಟ್ಟು 16 ಜಿಲ್ಲೆಗಳ ವಿಶೇಷ ಸಭೆಯಲ್ಲಿ 4 ವಿಭಾಗಗಳಾದ ಧಾರವಾಡ, ಕಲಬುರಗಿ, ಬೆಳಗಾವಿ ಹಾಗೂ ಬಳ್ಳಾರಿಯಿಂದ 640 ಪದಾಧಿಕಾರಿಗಳು ಉಪಸ್ಥಿತರಿದ್ದರು.