ETV Bharat / state

ವೀರಶೈವ ಲಿಂಗಾಯತರಲ್ಲಿ ವಿಷಬೀಜ ಬಿತ್ತಿ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ : ಬಿ ವೈ ವಿಜಯೇಂದ್ರ - ಈಟಿವಿ ಭಾರತ ಕನ್ನಡ

ಕಾಂಗ್ರೆಸ್ ಪಕ್ಷ ಸಮುದಾಯಗಳ ನಡುವೆ ವಿಷಬೀಜ ಬಿತ್ತುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದೆ. ಈ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಕಾಂಗ್ರೆಸ್​ ಇದೆ ಎಂದು ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

bjp-state-vice-president-vijayendra-slams-congress
ವೀರಶೈವ ಲಿಂಗಾಯತರಲ್ಲಿ ವಿಷಬೀಜ ಬಿತ್ತಿ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ : ವಿಜಯೇಂದ್ರ
author img

By

Published : Apr 24, 2023, 10:01 PM IST

ವೀರಶೈವ ಲಿಂಗಾಯತರಲ್ಲಿ ವಿಷಬೀಜ ಬಿತ್ತಿ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ : ವಿಜಯೇಂದ್ರ

ವಿಜಯಪುರ : ಕಾಂಗ್ರೆಸ್​ ಪಕ್ಷ ನಿರಂತರವಾಗಿ ವೀರಶೈವ ಲಿಂಗಾಯತ ಸಮಾಜ ಹಾಗೂ ಇತರ ಸಮುದಾಯಗಳ ನಡುವೆ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಈ ಮೂಲಕ ಹಿಂದಿನಿಂದಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾ ಬಂದಿದೆ. ಕಾಂಗ್ರೆಸ್​ ನವರು ಇಂದು ವೀರಶೈವ ಲಿಂಗಾಯತ ಸಮುದಾಯಕ್ಕೆ ಒಳಿತನ್ನು ಬಯಸುತ್ತಿಲ್ಲ. ಈ ಸಮುದಾಯವನ್ನು ಒಡೆದರೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ ವೈ ವಿಜಯೇಂದ್ರ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಲ್ಲೆಯ ಬಸವನಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಕೆ ಬೆಳ್ಳುಬ್ಬಿ ಪರ ಕೊಲ್ಹಾರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಲಿಂಗಾಯತ ಸಮಾಜ ಮಾತ್ರವಲ್ಲ, ಹಿಂದುಳಿದ ವರ್ಗ, ದಲಿತ ಸಮಾಜ ಮತ್ತು ವಾಲ್ಮೀಕಿ ಸಮಾಜ, ಅಲ್ಪ ಸಂಖ್ಯಾತರೂ ಕೂಡ ಬಿಜೆಪಿ ಪರವಾಗಿದ್ದಾರೆ. ಜೊತೆಗೆ ಜನರು ಇಂದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ನಿರ್ಧರಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ : ರಾಜ್ಯ ವಿಧಾನಸಭೆಗೆ ಅತಿ ಹೆಚ್ಚು ಬಾರಿ ಆಯ್ಕೆಯಾದ ಶಾಸಕ ಕಲಿಗಳು: ಅಖಾಡದಲ್ಲಿ ಇವರು ಬಾಹುಬಲಿಗಳು!

ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೀರಶೈವ ಲಿಂಗಾಯತರನ್ನು ಒಡೆಯುವ ಕುತಂತ್ರವನ್ನು ಮಾಡಿದ್ದು ಯಾರು ?. ಕಾಂಗ್ರೆಸ್​ ಈ ಹಿಂದೆ ಅಧಿಕಾರದಲ್ಲಿದ್ದಾಗ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದು ಗೊತ್ತಾದಾಗ ಲಿಂಗಾಯತ ಸಮುದಾಯವನ್ನು ಒಡೆಯಲು ಮುಂದಾಗಿದ್ದರು. ಇದೀಗ ಮತ್ತೆ ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಹುಲ್​ ಗಾಂಧಿ ವಿರುದ್ಧ ವಿಜಯೇಂದ್ರ ವಾಗ್ದಾಳಿ : ಇದಕ್ಕೆ ಪ್ರಾಯಶ್ಚಿತ್ತ ಎಂಬಂತೆ ನಿನ್ನೆ ರಾಹುಲ್ ಗಾಂಧಿ ಅವರು ಕೂಡಲಸಂಗಮಕ್ಕೆ ಹೋಗಿ ಬಸವಣ್ಣನವರ ಐಕ್ಯ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದರು.

ಬಿಜೆಪಿ 130 ರಿಂದ 140 ಸ್ಥಾನ ಗೆಲ್ಲುತ್ತದೆ : ಕೊಲ್ಹಾರದಲ್ಲಿ ಬಿಸಿಲನ್ನು ಲೆಕ್ಕಿಸದೆ ರೋಡ್​​ ಶೋನಲ್ಲಿ ಜನರು ಭಾಗವಹಿಸಿದ್ದಾರೆ. ಇವರ ಉತ್ಸಾಹ ನೋಡಿದರೆ ಬೆಳ್ಳುಬ್ಬಿ ಗೆದ್ದು ಬರುವುದು ಗ್ಯಾರಂಟಿ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವು ಮುಖಂಡರು ಬಿಜೆಪಿ ಸೇರಿದ್ದಾರೆ‌. ಜನ ಮೇ 10 ರಂದು ಬಿಜೆಪಿಗೆ ಮತಹಾಕುತ್ತಾರೆ ಎನ್ನುವ ವಿಶ್ವಾಸವಿದೆ. ರಾಜ್ಯದಲ್ಲಿ ಬಿಜೆಪಿ ಕನಿಷ್ಟ 130-140 ಸ್ಥಾನ ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೂ ಮುಂಚೆ ಕೊಲ್ಹಾರದಲ್ಲಿ ದಿಂಗಾಲೇಶ್ವರ ದೇವಸ್ಥಾನದಿಂದ ಬಸವೇಶ್ವರ ವೃತ್ತ ಮೂಲಕ ಪಟ್ಟಣದ ವಿವಿಧೆಡೆ ತೆರೆದ ವಾಹನದಲ್ಲಿ ವಿಜಯೇಂದ್ರ ರೋಡ ಶೋ ನಡೆಸಿದರು. ಈ ವೇಳೆ ಕಾರ್ಯಕರ್ತರು ಜೆಸಿಬಿ ಮೂಲಕ ಬೃಹತ್ ಹಾರ ಹಾಕಿ ಅಭಿನಂದಿಸಿದರು‌.

ಇದನ್ನೂ ಓದಿ : ವೀರಶೈವ ಮತಗಳು ಕೈಬಿಡುತ್ತವೆ ಎಂಬ ಆತಂಕ ಇಲ್ಲ : ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.