ವಿಜಯಪುರ: ಜಿಲ್ಲೆಯ ಪಟ್ಟಣ ಪ್ರದೇಶದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಡಿಮೆಯಾಗುತ್ತಿವೆ. ಆದರೆ ಇದುವರೆಗೂ 145 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ಬ್ಲ್ಯಾಕ್ ಫಂಗಸ್ನಿಂದ 35 ಮಂದಿ ಗುಣಮುಖರಾದ್ದಾರೆ. ಇನ್ನೂ 85 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
7 ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ ರೋಗಿಗಳು ಬಿಎಲ್ಡಿಇ ಸೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.