ETV Bharat / state

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಟೋಟ: ನಾಲ್ವರಿಗೆ ಗಾಯ - Etv Bharat Kannada

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನೂತನವಾಗಿ ಸ್ಥಾಪನೆ ಮಾಡಲಾದ ಬಾಯ್ಲರ್​ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಟೋಟ
ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಟೋಟ
author img

By

Published : Mar 4, 2023, 6:44 PM IST

ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ನೂತನವಾಗಿ ಸ್ಥಾಪಿತವಾದ ಬಾಯ್ಲರ್​ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ. ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನೂತನವಾಗಿ ಬಾಯ್ಲರ್ ಸ್ಥಾಪನೆ ಮಾಡಲಾಗಿತ್ತು. ನೂತನ ಬಾಯ್ಲರ್​ನ್ನು ಪ್ರಾಯೋಗಿಕವಾಗಿ ಪರೀಕ್ಷೆ ಮಾಡುವ ವೇಳೆ ಈ ಅವಘಡ ನಡೆದಿದೆ. ಈ ವೇಳೆ, ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳು ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಯ್ಲರ್​ ಸ್ಪೋಟದಿಂದ ಕಾರ್ಖಾನೆ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯವನ್ನು ಅಗ್ನಿಶಾಮಕ ದಳಕ್ಕೆ ತಿಳಿಸಲಾಗಿದ್ದು, ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. 220 ಟನ್ ಕೆಪಾಸಿಟಿಯ ಬಾಯ್ಲರ್​ 51 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಪುಣೆಯ ಮೂಲದ ಎಸ್​ಎಸ್ ಇಂಜೀನಿಯರ್ಸ್ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಅಲ್ಲದೇ ಸಕ್ಕರೆ ಕಾರ್ಖಾನೆಯಲ್ಲಿ ​ ಬಾಯ್ಲರ್ ಅನ್ನು ಎಸ್​ಎಸ್ ಇಂಜೀನಿಯರ್ಸ್ ಕಂಪನಿಯವರೇ ಅಳವಡಿಸಿದ್ದರು.

ಇನ್ನು ಈ ಹಿಂದೆ ದೆಹಲಿಯ ಐಎಸ್​ಜಿಸಿ ಕಂಪನಿಗೆ ಬಾಯ್ಲರ್​ ನಿರ್ಮಾಣಕ್ಕೆ ಗುತ್ತಿಗೆ ನೀಡಲಾಗಿತ್ತು. ಬಳಿಕ ನೀಡಿದ್ದ ಗುತ್ತಿಗೆಯನ್ನು ರದ್ದು ಪಡಿಸಿ, ಪುಣೆಯ ಮೂಲದ ಎಸ್​ಎಸ್ ಇಂಜಿನಿಯರ್ಸ್ ಕಂಪನಿಗೆ ಬಾಯ್ಲರ್ ನಿರ್ಮಿಸಲು ಗುತ್ತಿಗೆ ನೀಡಲಾಗಿತ್ತು. ದೆಹಲಿಯ ಐಎಸ್​ಜಿಸಿ ಕಂಪನಿಯ ಬಾಯ್ಲರ್ ಗುತ್ತಿಗೆ ರದ್ದು ಪಡಿಸಿದ್ದ ಕಾರಣ ದೆಹಲಿಯ ಕಂಪನಿಗೆ, ಸಹಕಾರಿ ಸಕ್ಕರೆ ಕಾರ್ಖಾನೆ 5 ಕೋಟಿ ರೂಪಾಯಿ ದಂಡವನ್ನು ಪಾವತಿಸಿದೆ. ಘಟನೆ ಬಳಿಕ ಕಳಪೆ ಗುಣಮಟ್ಟದ ಬಾಯ್ಲರ್ ಅಳವಡಿಕೆ ಮಾಡಿರುವ ಕುರಿತು ತನಿಖೆ ನಡೆಸಬೇಕು ಎಂದು ರೈತರ ಆಗ್ರಹಿಸಿದ್ದಾರೆ.

ಫಾರ್ಮಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ(ಆನೇಕಲ್): ಮೂರು ದಿನಗಳ ಹಿಂದೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಪೋಟಗೊಂಡು ಮೂವರು ಕಾರ್ಮಿಕರು ಗಂಭಿರವಾಗಿ ಗಾಯಗೊಂಡಿದ್ದರು. 'ಬಾಲ್ ಫಾರ್ಮಾ' ಎಂಬ ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್​ ಸ್ಪೋಟಗೊಂಡಿತ್ತು. ಘಟನೆಯಲ್ಲಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಪ್ರದೀಪ್, ಮುರುಗನ್ ಮತ್ತು ಕಿರಣ್ ಬಿ ಸಿ ಕೆಮಿಕಲ್ ಸಿಡಿತದಿಂದ ಗಂಭೀರವಾಗಿ ಗಾಯಗೊಂಡಿದ್ದರು. ಕಾರ್ಮಿಕ ಗಾಯಾಳುಗಳನ್ನು ಕೂಡಲೇ ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ‌ ನಡೆಸಿದ್ದರು.

ಗ್ಯಾಸ್​ ಗೀಸರ್​ ಸ್ಪೋಟಗೊಂಡು ಪತ್ರಕರ್ತ ಸಾವು(ದಾವಣಗೆರೆ): ಕೆಲ ದಿನಗಳ ಹಿಂದೆ ನಡೆದ ಘಟನೆಯಲ್ಲಿ ಸ್ನಾನ ಮಾಡಲೇಂದು ಗ್ಯಾಸ್ ಗೀಸರ್​ ಆನ್​ ಮಾಡಿದ ವೇಳೆ ಗೀಸರ್​ ಸ್ಫೋಟಗೊಂಡು ಪತ್ರಕರ್ತ ರಾಘವೇಂದ್ರ ಎನ್ನುವವರು ಮೃತಪಟ್ಟಿದ್ದರು. ಗೀಸರ್​ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ರಾಘವೇಂದ್ರ ಅವರನ್ನು ಚಿಕಿತ್ಸೆಗಾಗಿ ನಗರದ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ರಾಘವೇಂದ್ರ ಸಾವನ್ನಪ್ಪಿದ್ದರು. ರಾಜ್ಯಮಟ್ಟದ ಪತ್ರಿಕೆಯಲ್ಲಿ ಅರೆಕಾಲಿಕ ವರದಿಗಾರರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹೆಚ್ಚು ಕಾಲ ಪತ್ರಕರ್ತರಾಗಿ ಕೆಲಸ ಮಾಡಿದ ರಾಘವೇಂದ್ರ ಅವರು ಕೆಲದಿನಗಳ ಹಿಂದೆ ಪಾಲುದಾರಿಕೆಯಲ್ಲಿ ಹೋಟೆಲ್ ಸಹ ಆರಂಭಿಸಿದ್ದರು.

ಇದನ್ನೂ ಓದಿ: ಫಾರ್ಮಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ.. ಮೂವರ ಸ್ಥಿತಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.