ವಿಜಯಪುರ: ರಸ್ತೆಯ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಬೊಲೆರೋ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇನ್ನಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆಯ ಮನಗೂಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಧೀರಜ ಗಾಡೆ (35), ನಸೀರ ಜುಮ್ಮಾ (50) ಮೃತ ದುರ್ದೈವಿಗಳು. ಮೃತ ಕಾರ್ಮಿಕರು ಮಧ್ಯಪ್ರದೇಶ ಮೂಲದವರು ಎಂದು ತಿಳಿದು ಬಂದಿದ್ದು, ತಾವು ಚಲಿಸುತ್ತಿದ್ದ ವಾಹನ ಕೆಟ್ಟ ಹಿನ್ನೆಲೆ ರಸ್ತೆ ಪಕ್ಕಕ್ಕೆ ವಾಹನ ನಿಲ್ಲಿಸಿದ್ದರು. ಇವರು ಮುಂಡರಗಿ ಇಂದ ಪಂಡರಪುರಕ್ಕೆ ತೆರಳುತ್ತಿದ್ದರು. ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ಈ ಕುರಿತು ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.