ವಿಜಯಪುರ: ಮನೆಯಿಂದ ಬಹಿರ್ದೆಸೆಗೆ ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ತಾಂಡಾದಲ್ಲಿ ನಡೆದಿದೆ.
ನೇಣುಬಿಗಿದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಕಳೆದ ಸಪ್ಟೆಂಬರ್ 19 ರಂದು ಮನೆಯಿಂದ ತೆರಳಿದ್ದ ಬಾಲಕ ಉಮೇಶ ರಾಠೋಡ್ (16) ಶವವಾಗಿ ಪತ್ತೆಯಾಗಿದ್ದಾನೆ.
ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಸ್ಥಳಕ್ಕೆ ಬಸವನವಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.