ವಿಜಯಪುರ : ಕಬ್ಬು ತುಂಬಿದ ಲಾರಿಗೆ ಬುಲೆರೊ ಪಿಕ್ಅಪ್ ವಾಹನ ಢಿಕ್ಕಿಯಾಗಿ ಓರ್ವ ವ್ಯಕ್ತಿ ಸಾವಿಗೀಡಾದ ಘಟನೆ ಸಿಂದಗಿ ತಾಲೂಕಿನ ಯರಗಲ್ ಗ್ರಾಮದ ಹತ್ತಿರ ನಡೆದಿದೆ.
ಈ ಘಟನೆಯಲ್ಲಿ ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.