ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಪ್ರಾಣ ಹಾನಿ ಆದ ಬಗ್ಗೆ ತಿಳಿದುಬಂದಿಲ್ಲ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಗುಜರಾತ್ನಲ್ಲಿ ಅಕ್ರಮ ಮಸೀದಿ ಕಟ್ಟಡ ತೆರವು.. ಭುಗಿಲೆದ್ದ ಪ್ರತಿಭಟನೆ, ಐವರು ಪೊಲೀಸರಿಗೆ ಗಾಯ