ವಿಜಯಪುರ: ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಕಾಯ್ದೆ ವಿರೋಧಿಸಿ ಕಳೆದ 45 ದಿನಗಳಿಂದ ಮುಸ್ಲಿಂ ಸಮುದಾಯದ ಮಹಿಳೆಯರು ಧರಣಿ ನಡೆಸುತ್ತಿದ್ದಾರೆ.
ನಗರದ ಶಾಹಿನ್ ಭಾಗದಲ್ಲಿ ಮುಸ್ಲಿಂ ಸಮುದಾಯದ ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡುತ್ತಿರುವ ಕಾಯ್ದೆಗಳು ಜನ ವಿರೋಧಿಯಾಗಿವೆ. ದೇಶವಾಸಿಗಳ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಧರಣಿ ನಿರತ ಮಹಿಳೆಯರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಮೋದಿ ಅಮಿತ್ ಶಾ ತಮ್ಮ ಆಡಳಿತ ವೈಫಲ್ಯ ಮುಚ್ಚಿ ಹಾಕಲು ಪೌರತ್ವ ಕಾಯ್ದೆ ಜಾರಿ ಮಾಡಿದ್ದಾರೆ. ದೇಶದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಸರ್ಕಾರ ಮಾತ್ರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಧರಣಿ ಕುಳಿತ ಮಹಿಳೆಯರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ಹಿಂಪಡೆಯುವವರೆಗೂ ನಮ್ಮ ಧರಣಿ ನಿರಂತರವಾಗಿರುತ್ತದೆ ಎಂದು ಧರಣಿ ನಿರತ ಮಹಿಳೆಯರು ಕೇಂದ್ರ ಸರ್ಕಾರಕ್ಕೆ ಎಚ್ಚರಿಸಿದರು.