ETV Bharat / state

ಸಿಂದಗಿ ಬಳಿ ಟೈರ್​ ಸ್ಫೋಟವಾಗಿ ಕಾರು ಪಲ್ಟಿ.. ನಾಲ್ವರ ಸ್ಥಿತಿ ಗಂಭೀರ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ್ ಗ್ರಾಮದ ಬಳಿ ಕಾರಿನ ಟೈರ್ ಬ್ಲಾಸ್ಟ್​ ಆದ ಪರಿಣಾಮ ಕಾರು ಪಲ್ಟಿಯಾಗಿ ನಾಲ್ವರಿಗೆ ಗಂಭೀರವಾಗಿ ಗಾಯವಾದ ಘಟನೆ ನಡೆದಿದೆ.

author img

By

Published : Apr 4, 2023, 7:12 PM IST

ಸಿಂದಗಿ ಬಳಿ ಟೈರ್​ ಸ್ಫೋಟವಾಗಿ ಕಾರು ಪಲ್ಟಿ
ಸಿಂದಗಿ ಬಳಿ ಟೈರ್​ ಸ್ಫೋಟವಾಗಿ ಕಾರು ಪಲ್ಟಿ
ಸಿಂದಗಿ ಬಳಿ ಟೈರ್​ ಸ್ಫೋಟವಾಗಿ ಕಾರು ಪಲ್ಟಿ

ವಿಜಯಪುರ: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯವಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ್ ಗ್ರಾಮದ ಬಳಿ ಮಂಗಳವಾರ ನಡೆದಿದೆ.

ಕಾರಿನಲ್ಲಿದ್ದ ನಿಂಗಪ್ಪ ಕುಡಕಿ (75) ಪಾರ್ವತಿ ಕುಡಕಿ (60), ಸಿದ್ಧಾರೂಢ ಕುಡುಕಿ (20) ಅಯ್ಯಪ್ಪ ಕುಡಕಿ (36) ಎಂಬುವವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಮನೆಗಳ್ಳತನ : ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಚಿಕ್ಕ ಸಿಂದಗಿ ಬೈಪಾಸ್ ಬಳಿ ಬಂಧನವಾಗಿದೆ. ಅಣ್ಣಪ್ಪ ಜೇರಟಗಿ, ಸಿದ್ರಾಮ ಪಾಟೀಲ ಬಂಧಿತ ಆರೋಪಿಗಳಾಗಿದ್ದಾರೆ. ಸಿಂದಗಿಯ ಸುತ್ತಮುತ್ತಲಿನ ಕಡೆಗೆ ಮನೆಗಳ್ಳತನ ಮಾಡುತ್ತಿದ್ದ ಖದೀಮರು ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 5. 51 ಲಕ್ಷ ಮೌಲ್ಯದ 141.379 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಸಿಂದಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಗುಟ್ಕಾ ಚೀಲದಲ್ಲಿ ಸಾಗಿಸುತ್ತಿದ್ದ 10 ಲಕ್ಷ ನಗದು ಪೊಲೀಸ್ ವಶ: ದಾಖಲೆ ಇಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ ಹಣವನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಹೊರವಲಯದಲ್ಲಿರುವ ಕೃಷ್ಣಾ ನದಿಯ ನೀಲಮ್ಮನ ಸೇತುವೆ ಹತ್ತಿರದ ಚೆಕ್ ಪೋಸ್ಟ್​ನಲ್ಲಿ (ಮಾರ್ಚ್​ 24-2023) ರಂದು ಪೊಲೀಸರು ವಶಪಡಿಸಿಕೊಂಡಿದ್ದರು.

ಮುದ್ದೇಬಿಹಾಳದಿಂದ ತಂಗಡಗಿ, ಧನ್ನೂರ, ಹುನಗುಂದ ಮಾರ್ಗವಾಗಿ ಗಜೇಂದ್ರಗಡಕ್ಕೆ ಹೋಗುತ್ತಿದ್ದ ಬಸ್ಸನ್ನು ಪೊಲೀಸರು ತಡೆದು ತಪಾಸಣೆ ನಡೆಸಿದ್ದರು. ಆಗ ಗುಟ್ಕಾ ಚೀಲದಲ್ಲಿ 500, 200 ಮತ್ತು 50 ಮುಖಬೆಲೆ ನೋಟುಗಳು ಸೇರಿ ಒಟ್ಟು 10 ಲಕ್ಷ ರೂ. ಪತ್ತೆಯಾಗಿತ್ತು ಎಂಬುದು ತಿಳಿದುಬಂದಿದೆ.

ಈ ವೇಳೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಮುದ್ದೇಬಿಹಾಳದ ಸುಂದರ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ಮ್ಯಾನೇಜರ್ ಬಸಪ್ಪ ನಿಂಗಪ್ಪ ಹಡಗಲಿ ಎಂದು ಗುರುತಿಸಲಾಗಿತ್ತು. ನಂತರ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ ಬ್ಯಾಂಕ್​​ನಿಂದ ಬ್ಯಾಂಕಿಗೆ ವರ್ಗಾವಣೆ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದರು. ಆದರೆ ಹಣಕ್ಕೆ ಸಂಬಂಧಿಸಿದಂತೆ ಇವರ ಬಳಿ ಯಾವುದೇ ದಾಖಲೆಯೂ ಇರಲಿಲ್ಲ. ಇದರಿಂದ ಸಂಶಯಗೊಂಡ ಪೊಲೀಸ್ ಅಧಿಕಾರಿಗಳು, ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಹಣವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ದಾಖಲೆ ಇಲ್ಲದೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪದ ಮೇಲೆ ಮ್ಯಾನೇಜರ್ ಹಡಗಲಿ ವಿರುದ್ಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್ಐ ಆರೀಫ್ ಮುಷಾಪುರಿ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ : ವಿಜಯಪುರ: ಗುಟ್ಕಾ ಚೀಲದಲ್ಲಿ ಸಾಗಿಸುತ್ತಿದ್ದ 10 ಲಕ್ಷ ನಗದು ಪೊಲೀಸ್ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.