ETV Bharat / state

ಕಾರಿನ ವೇಗ ತಂದ ಆಪತ್ತು... ಓರ್ವ ಸಾವು, ನಾಲ್ವರು ಗಂಭೀರ - ಆಲಮೇಲ ಕಾರು ಅಪಘಾತ ಸುದ್ದಿ

ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ.

Car overturns near vijayapura , ವಿಜಯಪುರ ಕಾರು ಅಪಘಾತ ಸುದ್ದಿ
ಆಲಮೇಲ ಕಾರು ಅಪಘಾತ ಸುದ್ದಿ
author img

By

Published : Nov 27, 2019, 7:50 PM IST

ವಿಜಯಪುರ: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಆಲಮೇಲ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಹೊರವಲಯದಲ್ಲಿ ಕಾರು ಪಲ್ಟಿ

ಅಪಘಾತದಲ್ಲಿ ಲಾಲಸಾಬ (30) ಎಂಬಾತ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲರೂ ನಾಗರಹಳ್ಳಿ ಗ್ರಾಮಸ್ಥರು ಎಂದು ತಿಳಿದು ಬಂದಿದೆ. ನಾಗರಹಳ್ಳಿಯಿಂದ ಸಿಂದಗಿ ಕಡೆಗೆ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

Car overturns near vijayapura , ವಿಜಯಪುರ ಕಾರು ಅಪಘಾತ ಸುದ್ದಿ
ಪಲ್ಟಿಯಾಗಿ ಬಿದ್ದಿರುವ ಕಾರು

ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರ ಸಹಾಯದಿಂದ ಪಲ್ಟಿಯಾದ ಕಾರನ್ನು ಮೇಲೆತ್ತಲಾಗಿದೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಲಾಲಸಾಬ (30) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಳಾಗಿದ್ದು, ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎಲ್ಲರೂ ನಾಗರಹಳ್ಳಿ ಗ್ರಾಮಸ್ಥರು ಎಂದು ತಿಳಿದು ಬಂದಿದೆ.
ನಾಗರಹಳ್ಳಿಯಿಂದ ಸಿಂದಗಿ ಕಡೆಗೆ ಕಾರಿನಲ್ಲಿ ವೇಗವಾಗಿ ಬರುತ್ತಿದ್ದಾಗ, ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಲಾಲಸಾಬ ಸ್ಥಳದಲ್ಲಿ ಮೃತಪಟ್ಡಿದ್ದಾನೆ. ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಗ್ರಾಮಸ್ಥರ ಸಹಾಯದಿಂದ ಪಲ್ಟಿಯಾದ ಕಾರನ್ನು ಹೊರಕ್ಕೆ ತೆಗೆಯಲಾಯಿತು.
ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.