ವಿಜಯಪುರ: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ತಾಲೂಕಿನ ಬುರ್ಣಾಪೂರ ಬಳಿಯೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 10ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕು ಸ್ಥಾಪನೆ ನೇರವೇರಿಸಲಾಗಿತ್ತು. ವಿವಿಧ ಅಡೆತಡೆ ಕಾರಣ ಕಾಮಗಾರಿ ಆರಂಭವಾಗಿರಲಿಲ್ಲ ಎಂದು ಅವರು ಮಾಹಿತಿ ನೀಡಿದರು.
ಬೇಡಿಕೆ ಸಲ್ಲಿಸಿ 10 ವರ್ಷಗಳ ನಂತರ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಹಿಂದಿನ ಯುಪಿಎ ಸರ್ಕಾರದಿಂದಾಗಿ ವಿಮಾನ ನಿಲ್ದಾಣ ಕಾಮಗಾರಿಗೆ ಬ್ರೇಕ್ ನೀಡಲಾಗಿತ್ತು ಎಂದ ಅವರು, 727.01 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿರ್ಮಾಣವಾಗಲಿದೆ ಎಂದರು.