ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯಲ್ಲಿ ನಗರದ ಎಕ್ಸಲೆಂಟ್ ಪಿಯು ಕಾಲೇಜ್ ವಿದ್ಯಾರ್ಥಿನಿ ವೈಷ್ಣವಿ ಭುಸ್ತಾಳೆ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 154 ನೇ ರ್ಯಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಅಲ್ಲದೇ ಬಿಎಸ್ಸಿ ಅಗ್ರಿಕಲ್ಚರ್ ನಲ್ಲಿ 167 ನೇ ರಾಂಕ್ ಗಳಿಸಿದ್ದಾಳೆ. ವಿದ್ಯಾರ್ಥಿನಿ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಚೇರಮನ್ ಬಸವರಾಜ ಕೌಲಗಿ, ಶಿವಾನಂದ ಕೆಲೂರ, ಪ್ರಾಂಶುಪಾಲ ಡಿ.ಎಲ್.ಬನಸೋಡೆ, ಆಡಳಿತಾಧಿಕಾರಿ ಪರಶುರಾಮ ಭಾವಿಕಟ್ಟಿ ಹಾಗೂ ಕಾಲೇಜ್ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.