ವಿಜಯಪುರ: ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಛಲವಾದಿ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಛಲವಾದಿ ಮಹಾಸಭಾ ಕಾರ್ಯಕರ್ತರು ಇಂದು ಮನವಿ ಸಲ್ಲಿಸಿದರು.
ಹಲವು ವರ್ಷಗಳಿಂದ ಛಲವಾದಿ ಸಮುದಾಯ ಸರ್ಕಾರದ ಯೋಜನೆಗಳಿಂದ ವಂಚಿತವಾಗುತ್ತಿದೆ. ಫಲಾನುಭವಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಮುದಾಯ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಸರ್ಕಾರ ಸಮುದಾಯಕ್ಕೆ ನಿಗಮ ಸ್ಥಾಪನೆ ಮಾಡುವುರಿಂದ ಸಮುದಾಯ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದು ಛಲವಾದಿ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು.
ಇನ್ನು ಬೇರೆ ಸಮುದಾಯಗಳಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ಹಾಗೇ, ಛಲವಾದಿ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ 100 ಕೋಟಿ ಮೀಸಲಿಡುವಂತೆ ಒತ್ತಾಯಿಸಿ ಮಹಾಸಭಾ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತಿಗೆ ಮನವಿ ಸಲ್ಲಿಸಿದರು.