ETV Bharat / state

ಮುದ್ದೇಬಿಹಾಳ: ಪ್ರಶ್ನೆ ಪತ್ರಿಕೆ ವೈರಲ್, ಪರೀಕ್ಷಾ ಕರ್ತವ್ಯದಲ್ಲಿದ್ದವರ ಬದಲಾವಣೆ

ಎಸ್​ಎಸ್​ಎಲ್​ಸಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ.

author img

By

Published : Apr 7, 2022, 9:41 PM IST

Muddebihal sslc exam center
ಪ್ರಶ್ನೆ ಪತ್ರಿಕೆ ವೈರಲ್....ಪರೀಕ್ಷಾ ಕರ್ತವ್ಯದಲ್ಲಿದ್ದವರ ಬದಲಾವಣೆ

ಮುದ್ದೇಬಿಹಾಳ (ವಿಜಯಪುರ): ತಾಲೂಕಿನ ಢವಳಗಿ ಮಡಿಕೇಶ್ವರ ಬಸನಗೌಡ ಪಾಟೀಲ್ ಪ್ರೌಢಶಾಲೆಯಲ್ಲಿ ಬುಧವಾರ ಪರೀಕ್ಷೆ ಪ್ರಾರಂಭದ ನಂತರ ಎಸ್​ಎಸ್​ಎಲ್​ಸಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರದ ಹಲವರ ತಲೆದಂಡವಾಗಿದ್ದು, ವಿದ್ಯಾರ್ಥಿಯ ವಿರುದ್ಧ ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಲಾಗಿದೆ.

ಪ್ರಶ್ನೆಪತ್ರಿಕೆ ವೈರಲ್​ ಆಗಲು ಸಹಕರಿಸಿರುವ ರೂಢಗಿ ಗ್ರಾಮದ ಸರ್ಕಾರಿ ಆರ್‌ಎಂಎಸ್‌ಎ ಪ್ರೌಢಶಾಲೆಯ ವಿದ್ಯಾರ್ಥಿ ಬಸವರಾಜ ಕುಂದರಗಿಯನ್ನು ಪರೀಕ್ಷೆಯಿಂದ ಡಿಬಾರ್ ಮಾಡಿದ್ದು, ಅವನ ಪ್ರಶ್ನೆ ಪತ್ರಿಕೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡ ಅನಾಮಧೇಯ ವ್ಯಕ್ತಿಯ ವಿರುದ್ಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಶಿಕ್ಷಣ ಕಾಯ್ದೆ 1983 ಮತ್ತು 2017ರ ತಿದ್ದುಪಡಿ ಕಾಯ್ದೆ ಅನ್ವಯ ಬಿಇಓ ಎಚ್.ಜಿ.ಮಿರ್ಜಿ ಅವರು ದೂರು ಸಲ್ಲಿಸಿದ್ದಾರೆ.

ಪ್ರಶ್ನೆಪತ್ರಿಕೆ ಬಹಿರಂಗಗೊಂಡ ಕೊಠಡಿಯ ಮೇಲ್ವಿಚಾರಕರಾಗಿದ್ದ ಮಡಿಕೇಶ್ವರ ಗ್ರಾಮದ ಖಾಸಗಿ ಅನುದಾನಿತ ಶಾಲೆಯ ಶಿಕ್ಷಕ ಬಿ.ಎಸ್.ಪೊಲೇಶಿ ಅವರನ್ನು ವಿಜಯಪುರ ಡಿಡಿಪಿಐ ಎನ್.ವಿ.ಹೊಸೂರ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆ ಕುರಿತ ಪತ್ರವನ್ನು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಿಗೆ ನೀಡಿ ಅವರನ್ನು ಬಿಡುಗಡೆಗೊಳಿಸಲು ಸೂಚಿಸಿದ್ದಾರೆ.

ಇನ್ನುಳಿದಂತೆ, ಸ್ಥಾನಿಕ ಜಾಗೃತ ದಳದ ಅಧಿಕಾರಿಯಾಗಿದ್ದ ಬಿದರಕುಂದಿ ಆರ್‌ಎಂಎಸ್‌ಎ ಆದರ್ಶ ಶಾಲೆಯ ಶಿಕ್ಷಕಿ ಎಸ್.ಎಲ್.ಸೋಂಪೂರ ಅವರನ್ನು ಪರೀಕ್ಷಾ ಕರ್ತವ್ಯದಿಂದ ಬಿಡುಗಡೆಗೊಳಿಸಿ ನೋಟಿಸ್ ಜಾರಿ ಮಾಡಲಾಗಿದೆ. ಮುಖ್ಯ ಅಧೀಕ್ಷಕ ಎಂಬಿಪಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಬಿ.ಎಸ್.ಪಾಟೀಲ ಮತ್ತು ಪ್ರಶ್ನೆಪತ್ರಿಕೆ ಅಭಿರಕ್ಷಕ ಜಮ್ಮಲದಿನ್ನಿ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯ ಶಿಕ್ಷಕ ವೈ.ವಿ.ಕನ್ನೂರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಇದನ್ನೂ ಓದಿ: ಉಡುಪಿ: ಕೇರಳದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು

ಇವರ ಸ್ಥಾನದಲ್ಲಿ ಕ್ರಮವಾಗಿ ಜಮ್ಮಲದಿನ್ನಿ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲ ಬಿ.ಎಂ.ಬಸವಂತಪುರ ಮತ್ತು ಕೋಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಸ್.ಎನ್.ರಾಠೋಡ ಅವರನ್ನು ನೇಮಿಸಲಾಗಿದೆ. ಕರ್ತವ್ಯದಿಂದ ಬಿಡುಗಡೆಗೊಳಿಸಿದ ಇಬ್ಬರಿಗೂ ಕಾರಣ ಕೇಳುವ ನೋಟಿಸ್ ಜಾರಿಗೊಳಿಸಲಾಗಿದೆ.

ಸದರಿ ಪರೀಕ್ಷಾ ಕರ್ತವ್ಯಕ್ಕೆ ನೇಮಕಗೊಂಡಿದ್ದ ಎಲ್ಲ ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬದಲಾಯಿಸಿ ಅವರ ಜಾಗದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಜಿಟಿ, ಟಿಜಿಟಿ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಲಾಗಿದೆ ಎಂದು ಬಿಇಓ ಎಚ್.ಜಿ.ಮಿರ್ಜಿ ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಡಿಡಿಪಿಐ ಎನ್.ವಿ.ಹೊಸೂರ, ಬಿಇಒ ಹೆಚ್.ಜಿ.ಮಿರ್ಜಿ, ಸಮನ್ವಯಾಧಿಕಾರಿ ಯು.ಬಿ. ಧರಿಕಾರ ಮೊದಲಾದವರು ಪ್ರಶ್ನೆ ಪತ್ರಿಕೆ ಬಹಿರಂಗವಾಗಲು ಕಾರಣವಾದ ಸ್ಥಳವನ್ನು ಪರಿಶೀಲನೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.