ವಿಜಯಪುರ: ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಎಪಿಎಂಸಿ ಪೊಲೀಸ್ ಠಾಣೆಯ ಪಿಎಸ್ಐ ಪ್ರೇಮಾ ಕೂಚಬಾಳ ನಗರದ ಇಂಡಿ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದ ಬೈಕ್ ಸವಾರರಿಗೆ ದಂಡ ವಿಧಿಸುತ್ತಿದ್ದರು. ಈ ವೇಳೆ ನಿಯಮ ಉಲ್ಲಂಘಿಸಿದ ಮಲ್ಲಾರಿ ನಾಗರಗೋಜಿ, ಆನಂದ ವಂಬಾಸೆ ಹಾಗೂ ರೇಖಾ ವಂಬಾಸೆಗೆ ಪಿಎಸ್ಐ ದಂಡ ವಿಧಿಸಿದ್ದಾರೆ. ಫೈನ್ ಕಟ್ಟಲು ನಿರಾಕರಿಸಿರುವ ಆರೋಪಿಗಳು ಅಧಿಕಾರಿ ಪ್ರೇಮ ಕೂಚಬಾಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹಲ್ಲೆ ನಡೆಸಿರುವವರ ಪೈಕಿ ಓರ್ವ ಆರೋಪಿ ಪರಾರಿಯಾಗಿದ್ದು, ಮೂವರ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಆರೋಪಿಗಳಿಂದ ಬೈಕ್ ವಶಕ್ಕೆ ಪಡೆಯಲಾಗಿದೆ. ಹಲ್ಲೆಗೊಳಗಾದ ಪಿಎಸ್ಐಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.