ETV Bharat / state

ಹುಬ್ಬಳ್ಳಿ ಗಲಭೆಯಲ್ಲಿ ಹರಡುವ ಸುಳ್ಳು ಸುದ್ದಿಗಳ ಬಗ್ಗೆ ಪರಿಶೀಲಿಸಿ: ಸತೀಶ್​ ಜಾರಕಿಹೊಳಿ - hubbli riot

ಹುಬ್ಬಳ್ಳಿ ಗಲಾಟೆ ವಿಚಾರ ವಿವಿಧ ಆಯಾಮದಲ್ಲಿ ಪ್ರಚಾರ ಪಡೆಯುತ್ತಿದ್ದು, ಅವುಗಳ ಬಗ್ಗೆ ಹರಿದಾಡುತ್ತಿರುವ ವಿಚಾರಗಳು ನಿಜವೋ ಸುಳ್ಳೋ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಿ ಪ್ರತಿಕ್ರಿಯೆ ನೀಡಿ ಎಂದು ಸತೀಶ್​ ಜಾರಕಿಹೊಳಿ ಕೇಳಿಕೊಂಡಿದ್ದಾರೆ.

KPCC President Sathish Jarakiholi
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
author img

By

Published : Apr 17, 2022, 5:32 PM IST

ವಿಜಯಪುರ: ಕಳೆದ ರಾತ್ರಿ ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ವಿಚಾರ ಸೂಕ್ಷ್ಮವಾಗಿದ್ದು, ಧಾರ್ಮಿಕ ವಿಚಾರ ಬಂದಾಗ ಸಮಾಧಾನದಿಂದ ಇರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ವಿಜಯಪುರದಲ್ಲಿ ಮಾಜಿ ಸಚಿವ ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಧಾರ್ಮಿಕ ವಿಚಾರದಲ್ಲಿ ಹುಟ್ಟುವ ವಿಚಾರಗಳು ಸಾಕಷ್ಟು ಫೇಕ್ ಆಗಿರುತ್ತವೆ. ಎಲ್ಲ ಜಾತಿ ಧರ್ಮದವರು ಇಂಥವುಗಳನ್ನು ಕೂಲಂಕಷವಾಗಿ ವಿಚಾರ ಮಾಡಿ ಪ್ರತಿಕ್ರಿಯೆ ನೀಡಬೇಕು ಎಂದು ತಿಳಿ ಹೇಳಿದರು. ಹುಬ್ಬಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರೇಣುಕಾಚಾರ್ಯಗೆ ಮಾಡೋಕೆ‌‌ ಕೆಲಸವಿಲ್ಲ, ಇಂಥ ಫೇಕ್ ಸುದ್ದಿ ಹರಡಿಸುವವರು ಬಿಜೆಪಿಯ ಐಟಿ ಸೆಲ್​ನವರು ಎಂದು ಆರೋಪಿಸಿದರು.

ಕಾಂಗ್ರೆಸ್ ಪ್ರತಿಭಟನೆ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಹಿಂದೆ ಬಿಜೆಪಿ ಮುಖಂಡ ಈಶ್ವರಪ್ಪ ಕೈವಾಡವಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮೊದಲು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗಾಂಧಿವೃತ್ತದಿಂದ ಅಂಬೇಡ್ಕರ್ ಸರ್ಕಲ್​ವರೆಗೆ ಪ್ರತಿಭಟನೆ‌ ನಡೆಸಿ ಬಿಜೆಪಿ ಸರ್ಕಾರ ಹಾಗೂ ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು.

ಇದನ್ನೂ ಓದಿ: ಪ್ರತಿಯೊಂದಕ್ಕೂ ಗಲಾಟೆ ಮಾಡುವ ಮನಸ್ಥಿತಿಯಿಂದ ಹೊರ ಬರಬೇಕು.. ಈಗ್ಯಾಕೆ ಸೆಕ್ಯೂಲರ್​ಗಳು ಮೌನವಾಗಿದ್ದಾರೆ? : ಶಾಸಕ ಸಿ ಟಿ ರವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.