ವಿಜಯಪುರ: ಡೆಂಗ್ಯೂ ಮಹಾಮಾರಿಗೆ ನಗರದಲ್ಲಿ ಬಾಲಕ ಬಲಿಯಾಗಿದ್ದಾನೆ.
ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ಶಿವನಗೌಡ ಪಾಟೀಲ್(9) ಮೃತ ಬಾಲಕ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಅಕ್ಟೋಬರ್ 23ರಂದು ಖಾಸಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.
ಮೃತ ಬಾಲಕನ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.