ವಿಜಯಪುರ: ಟಿಕ್-ಟಾಕ್ ನಲ್ಲಿ ನಿಂದನೆ ಪ್ರಶ್ನಿಸಿದ್ದಕ್ಕೆ ದಲಿತರ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಘಟನೆಯಲ್ಲಿ 3 ಜನ ಮಹಿಳೆಯರು ಸೇರಿ 5 ಜನರಿಗೆ ಗಾಯಗಳಾಗಿವೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಲಗುರ್ಕಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.