ವಿಜಯಪುರ: ಹವಾಮಾನ ವೈಪರೀತ್ಯದಿಂದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಇಂದು ವಿಜಯಪುರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಡೆಸಬೇಕಾಗಿದ್ದ ವೈಮಾನಿಕ ಸಮೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಜಿಲ್ಲೆಯ ಭೀಮಾ, ಕೃಷ್ಣಾ ಮತ್ತು ಡೋಣಿ ನದಿಯಲ್ಲಿನ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಇಂದು ಸಿಎಂ ವಿಜಯಪುರ ಜಿಲ್ಲೆಗೆ ಆಗಮಿಸಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದಿಂದ ವೈಮಾನಿಕ ಸಮೀಕ್ಷೆ ರದ್ದಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಆಗಮಿಸಿದ್ದರು. ಯಾದಗಿರಿ, ಗುಲಬುರ್ಗಾ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ವಿಜಯಪುರ ಜಿಲ್ಲೆ ಸೇರಿದಂತೆ ವಿವಿಧಡೆ ಮಳೆಯಾದ ಕಾರಣ ವಿಜಯಪುರ ಜಿಲ್ಲೆಯಲ್ಲಿ ನಡೆಸಬೇಕಾಗಿದ್ದ ವೈಮಾನಿಕ ಸಮೀಕ್ಷೆಯನ್ನು ಹವಾಮಾನ ವೈಪರೀತ್ಯದಿಂದಾಗಿ ಕೊನೆಗಳಿಗೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.