ವಿಜಯಪುರ(ಬಾಗಲಕೋಟೆ): ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಆಲಮಟ್ಟಿ ಜಲಾಶಯಕ್ಕೆ ಆಗಮಿಸಿ, ಕೃಷ್ಣ ನದಿಗೆ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿ ಆದ ಬಳಿಕ ಇದೇ ಪ್ರಥಮ ಬಾರಿಗೆ ಅವಳಿ ಜಿಲ್ಲೆಗೆ ಸಿಎಂ ಆಗಮಿಸಿದ್ದರು.
ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಿದ ಸಿಎಂ, ಡ್ಯಾಂ ಸಮೀಪ ವ್ಯವಸ್ಥೆ ಮಾಡಿದ್ದ ಬಾಗಿನ ಅರ್ಪಣೆ ಸ್ಥಳಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಮೂರು ಅರ್ಚಕರು ಗಂಗಾಮಾತೆಗೆ ಪೂಜೆ ನೇರವೇರಿಸಿದರು. ನಂತರ ಕೃಷ್ಣಾ ನದಿಗೆ ಬಾಗಿನ ಅರ್ಪಣೆ ಮಾಡಿದರು.
ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಸಿ ಸಿ ಪಾಟೀಲ, ಶಾಸಕ ಬಸವಗೌಡ ಪಾಟೀಲ ಯತ್ನಾಳ, ವೀರಣ್ಣ ಚರಂತಿಮಠ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಅವಳಿ ಜಿಲ್ಲೆಯ ಶಾಸಕರು, ಸಚಿವರು ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಂತರ ಅವಳಿ ಜಿಲ್ಲೆಯ ಜನಪ್ರತಿನಿಧಿಗಳ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕೆಲ ಮಹತ್ವದ ವಿಷಯಗಳ ಚರ್ಚಿಸಿದರು.