ಮುದ್ದೇಬಿಹಾಳ (ವಿಜಯಪುರ) : ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ ಬೆಳೆಗಾರರಿಗೆ ಅಗತ್ಯ ನೆರವು ನೀಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ ಅವರು, ಕಳೆದ ವಾರ ನಮ್ಮೊಂದಿಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡಿದ್ದಾರೆ. ಈ ವೇಳೆ, ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ನಿಂಬೆ ಬೆಳೆಗಾರರ ಬೆಳೆಗಳು ಹೊರರಾಜ್ಯಗಳಿಗೆ ರಫ್ತು ಆಗದೇ ಉಳಿದುಕೊಂಡಿರುವ ಬಗ್ಗೆ ಸಿಎಂ ಗಮನಕ್ಕೆ ತಂದು ರಫ್ತು ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದೇನೆ. ಜೊತೆಗೆ ಕೋಲ್ಡ್ ಸ್ಟೋರೇಜ್ ಸ್ಥಾಪಿಸಿಕೊಡುವಂತೆಯೂ ಕೇಳಿಕೊಂಡಿದ್ದೇನೆ ಎಂದರು.
ಜಿಲ್ಲಾಡಳಿತದ ಶ್ರಮಕ್ಕೆ ಸಿಎಂ ಶ್ಲಾಘನೆ : ಕೊರೊನಾ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲೆ ರೆಡ್ ಝೋನ್ನಿಂದ ಗ್ರೀನ್ ಝೋನ್ ಆಗುತ್ತಿರುವುದ್ಕಕ್ಕೆ ಸಂತಸ ವ್ಯಕ್ತಪಡಿಸಿದ್ದು, ಕೊರೊನಾ ಹೋರಾಟದಲ್ಲಿ ನಿರತರಾಗಿರುವ ಜಿಲ್ಲೆಯ ವೈದ್ಯರು, ಆಶಾ ಕಾರ್ಯಕರ್ತರು, ಪೊಲೀಸ್ ಮತ್ತು ಮಾಧ್ಯಮ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದರು.