ETV Bharat / state

ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಡಿಸಿ ಸುನೀಲ್ ಕುಮಾರ ಸೂಚನೆ

ವಿಜಯಪುರದ ಕೈಗಾರಿಕಾ ಪ್ರದೇಶದ ರಸ್ತೆ ಹಾಗೂ ಒಳಚರಂಡಿಗಳ ಮೇಲ್ದರ್ಜೆಗೇರಿಸುವ ಕಾಮಗಾರಿ ಪ್ರಾರಂಭಿಸಲಾಗಿದ್ದು, ಸೆಪ್ಟಂಬರ್​ ಅಂತ್ಯಕ್ಕೆ ಮುಗಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ತಿಳಿಸಿದರು.

DC sunil kumar
ಜಿಲ್ಲಾಧಿಕಾರಿ ಪಿ.ಸುನೀಲ್
author img

By

Published : Sep 3, 2020, 9:20 PM IST

ವಿಜಯಪುರ: ಜಿಲ್ಲೆಯಲ್ಲಿ ಅಲಿಯಾಬಾದ ಹಂತ-1 ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಹಾಗೂ ಚರಂಡಿಗಳ ಮೇಲ್ದರ್ಜೆಗೇರಿಸುವ ಕಾಮಗಾರಿ ಪ್ರಾರಂಭಿಸಲಾಗಿದ್ದು, ಸೆಪ್ಟೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

DC sunil kumar
ಜಿಲ್ಲಾಧಿಕಾರಿ ಪಿ.ಸುನೀಲ್

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆ ಬ.ಬಾಗೇವಾಡಿ ತಾಲೂಕಿನ ಮುಳವಾಡ ಗ್ರಾಮದಲ್ಲಿ ಸುಮಾರ 3239.03 ಎಕರೆ ಜಮೀನನ್ನು ಕೈಗಾರಿಕಾ ಸ್ಥಾಪನೆಗೆ ಸ್ವಾಧೀನ ಪಡಿಸಿಕೊಂಡಿದ್ದು, ಅದರಲ್ಲಿ ಮೊದಲನೇ ಹಂತದ 564 ಜಮೀನಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ನವೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಮುಳವಾಡ ಗ್ರಾಮದ ಮೊದಲ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ಸಿವಿಲ್ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಶೀಘ್ರವಾಗಿ ವಿದ್ಯುತ್ ಸೌಲಭ್ಯ ಕಲ್ಪಿಸಲು ಅನುಕೂಲವಾಗುವಂತೆ ವಿದ್ಯುತ್ ಇಲಾಖೆಯ ಸಂಬಂಧಪಟ್ಟ ಕಾರ್ಯ ನಿರ್ವಾಹಕ ಅಭಿಯಂತರರು ಖುದ್ದಾಗಿ ತಮ್ಮೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ರಚಿಸಿ, ಕಾಮಗಾರಿಗಳಲ್ಲಿ ಸೂಕ್ತ ಪ್ರಗತಿ ಸಾಧಿಸಲು, ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಸೂಚಿಸಿದರು.

ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಠಾಣೆ ಸ್ಥಾಪಿಸುವ ಕುರಿತಂತೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದ್ದು, ಕೋವಿಡ್-19 ಸಾಂಕ್ರಾಮಿಕ ನಿಮಿತ್ತ ಸಾಧ್ಯವಾಗದೇ ಉಳಿದಿದ್ದು, ಈ ಕುರಿತು ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅವಶ್ಯಕ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇನ್ನು ಮುದ್ದೇಬಿಹಾಳದ ಕೈಗಾರಿಕಾ ವಸಾಹತು 6 ಎಕರೆ ಜಾಗವನ್ನು ಕೆಎಸ್​ಐಡಿಸಿ ಹೆಸರಿಗೆ ಹಸ್ತಾಂತರ ಮಾಡುವ ಕುರಿತ ಪ್ರಸ್ತಾವನೆ ಬಂದಿದೆ. ಈ ಕುರಿತ ಜಮೀನು ಮಂಜೂರು ಹಾಗೂ ಪಹಣಿ ಪತ್ರವನ್ನು ಸಹ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಅದರ ಹಂಚಿಕೆಯಾದ ಕೂಡಲೇ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಲಾಗುವ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು. ಸಿಂದಗಿ ತಾಲೂಕು ಸಣ್ಣ ಕೈಗಾರಿಕಾ ಉದ್ಯಮಿದಾರರು ಹಾಗೂ ಸೇವಾ ಸಂಸ್ಥೆಗಳ ವತಿಯಿಂದ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಆದ್ಯತೆ ಮೇಲೆ ಜಲ ಸಂಪನ್ಮೂಲ ಗುರುತಿಸಿ ಶಾಶ್ವತ ನೀರಿನ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಂಘ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಿಬೇಕು ಎಂದರು.

ಸೌತ್ ಇಂಡಿಯಾ ವೇರ್ ಹೌಸ್ ಕಾರ್ಪೋರೇಷನ್, ಪ್ಲಾಟ್ ನಂ2, ಕೆಐಎಡಿಬಿ ಕೈಗಾರಿಕಾ ಪ್ರದೇಶ, ಆಲಿಯಾಬಾದ ಬ್ಲಾಕ್-2 ರಸ್ತೆ ಬದಿ ಅನಧಿಕೃತ ಅಂಗಡಿಗಳು, ಪಿಡಬ್ಲೂಡಿ, ನಗರ ವ್ಯಾಪ್ತಿಯಲ್ಲಿ ಬರುವ ಬಗ್ಗೆ ಪರಿಶೀಲಿಸಿ ಅಲ್ಲಿ ಅಧಿಕಾರಿಗಳು ಜಂಟಿಯಾಗಿ ಒಂದು ತಿಂಗಳಲ್ಲಿ ಬಗೆಹರಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿ.ಪಂ ಸಿಇಒ ಗೋವಿಂದ ರೆಡ್ಡಿ ಇದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ ಸ್ವಾಗತಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.