ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ನಡೆಯಿತು.
ಜಿಲ್ಲಾಡಳಿತ ಭವನದಲ್ಲಿ ಇಂದು ಶಿವಾಜಿ ಹಾಗೂ ಸವಿತಾ ಮಹರ್ಷಿ ಜಯಂತಿ ಆಯೋಜಿಸಲಾಗಿತ್ತು. ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ನೇತ್ವತ್ವದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ಮಾಜಿ ಜಿಲ್ಲಾಧ್ಯಕ್ಷ ರಾಘು ಪೂಜಾರಿ ವೇದಿಕೆಗೆ ಆಗಮಿಸಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಹಾಲಿ ಜಿಲ್ಲಾಧ್ಯಕ್ಷ ಲಿಂಗರಾಜ ಪೂಜಾರಿ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಾಲಿ ಅಧ್ಯಕ್ಷರನ್ನು ವೇದಿಕೆಗೆ ಆಹ್ವಾನಿಸುವುದನ್ನು ಬಿಟ್ಟು ಮಾಜಿ ಜಿಲ್ಲಾಧ್ಯಕ್ಷರನ್ನು ಆಹ್ವಾನಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಜಯಂತಿ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಹೊರ ನಡೆದರು.
ಸವಿತಾ ಸಮಾಜದ ಮಾಜಿ ಜಿಲ್ಲಾಧ್ಯಕ್ಷರು ವೇದಿಕೆ ಏರಿದ್ದಲ್ಲದೇ ಸನ್ಮಾನದಲ್ಲಿ ಭಗವಹಿಸಿ, ಸವಿತಾ ಸಮಾಜದ ಪರ ಘೋಷಣೆ ಕೂಗಿದ್ದಕ್ಕೆ ಹಾಲಿ ಸವಿತಾ ಸಮಾಜದ ಅಧ್ಯಕ್ಷ ಹಾಗೂ ಅವರ ಬೆಂಬಲಿಗರು ಹೊರ ನಡೆದರು.