ವಿಜಯಪುರ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.
ಕೊರೊನಾ ಲಾಕ್ಡೌನ್ನಿಂದ ಜನರು ತತ್ತರಿಸಿದ್ದಾರೆ. ಜೀವನ ನಡೆಸಲು ಆಗುತ್ತಿಲ್ಲ. ಈ ಸಂದರ್ಭದಲ್ಲಿ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಅಭಿವೃದ್ಧಿಯ ಆಡಳಿತ ನೀಡಲು ವಿಫಲವಾಗಿದೆ. ಸುಳ್ಳು ಭರವಸೆಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ.
ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಡಿಮೆ ಬೆಲೆ ಮಾರಾಟವಾಗುವ ಪೆಟ್ರೋಲ್, ಡೀಸೆಲ್ ಬೆಲೆಗಳ ಅನುಗುಣವಾಗಿ ದೇಶದಲ್ಲಿ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು.